ಬೇಸಿಗೆ ಮುಗಿಯುವವರೆಗೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮವಹಿಸಬೇಕು: ಸಂತೋಷ ಲಾಡ್
Authorities should take steps to ensure that there is no drinking water problem until the summer is
ಧಾರವಾಡ ಏ.27: ಬೇಸಿಗೆ ಕಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಯಾವುದೇ ಗ್ರಾಮ ಹಾಗೂ ಪಟ್ಟಣಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ತಹಶೀಲ್ದಾರರು ಮತ್ತು ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ನಿರಂತರವಾಗಿ ನಿಗಾವಹಿಸಬೇಕು. ಈಗಾಗಲೇ ಜಿಲ್ಲೆಯ ವಿವಿಧ ತಾಲೂಕುಗಳ 15 ಗ್ರಾಮಗಳಲ್ಲಿ 17 ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಜಿಲ್ಲಾಡಳಿತ ಮೇಲಸ್ತುವಾರಿಯಲ್ಲಿ ಕ್ರಮವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಇಂದು (ಏ.27) ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ 2025-26 ನೇ ಸಾಲಿನ ಮಾರ್ಚ 2026 ರ ಅಂತ್ಯಕ್ಕೆ ಕೊನೆಗೊಂಡಂತೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿ ನಾಲ್ಕನೇಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರೀಶೀಲನಾ ಸಭೆಯನ್ನು ಜರುಗಿಸಿ, ಮಾತನಾಡಿದರು. ಮುಂಗಾರು ಪೂರ್ವದಲ್ಲಿ ಮಳೆಗಳು ಹೆಚ್ಚಾಗುತ್ತಿದ್ದು, ಯಾವುದೇ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳು ಆರಂಭವಾಗಿದ್ದು, ರೈತರಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಪೂರೈಕೆಯಾಗಬೇಕು. ಬಿತ್ತನೆ ಸಮಯದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೃಷಿ ಇಲಾಖೆ ಯೋಜನಾ ಬದ್ಧವಾಗಿ ಬೀಜ, ರಸಗೊಬ್ಬರ ವಿತರಣೆಯನ್ನು ಮಾಡಬೇಕೆಂದು ಸಚಿವರು ಸೂಚಿಸಿದರು.
ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯು ಜಿಲ್ಲೆಯ ಎಪಿಎಂಸಿ ಗಳ ಸುಧಾರಣೆಗೆ ಅಗತ್ಯವಾದ ಪ್ರಸ್ತಾವನೆಯನ್ನು ರೂಪಿಸಬೇಕು. ಪಿಪಿಟಿ ಮೂಲಕ ಇಲಾಖೆಯಿಂದ ಜನಪ್ರತಿನಿಧಿಗಳ ಮುಂದೆ ಪ್ರದರ್ಶನ ನೀಡಿ, ಎಪಿಎಂಸಿ ಗಳ ಅಭಿವೃದ್ಧಿಗೆ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿವರಿಸಬೇಕು. ಅಗತ್ಯವಿದ್ದಲ್ಲಿ ಸರ್ಕಾರಿಂದ ವಿಶೇಷ ಅನುದಾನ ತರಲು ಪ್ರಯತ್ನಿಸಲಾಗುವುದು. ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಖರೀದಿ ಕೇಂದ್ರಗಳಲ್ಲಿ ಚೀಲಗಳ ಕೊರತೆಯಾದ ಕುರಿತು ಮನವಿ ಸಲ್ಲಿಕೆಯಾಗುತ್ತಿವೆ. ಈ ಕುರಿತು ಕ್ರಮವಹಿಸಿ, ಜಿಲ್ಲೆಗೆ ಅಗತ್ಯವಿರುವ ಗೋಣಿಚೀಲಗಳನ್ನು ತರಿಸಬೇಕು. ಮತ್ತು ಬ್ಯಾಹಟ್ಟಿ ಖರೀದಿ ಕೇಂದ್ರದಿಂದ ಖರೀದಿಸಿದ್ದ ರೈತರ ಹೆಸರು ಕಾಳು ಕುರಿತು ಹಣ ಪಾವತಿಸುವಲ್ಲಿ ತಾಂತ್ರಿಕ ಸಮಸ್ಯೆ ಆಗಿದ್ದು, ಸಂಬಂಧಿಸಿದ ಅಧಿಕಾರಿಗಳು ಪರೀಶೀಲಿಸಿ, ಸಮಸ್ಯೆ ಬಗೆಹರಿಸಬೇಕು ಎಂದು ಸಚಿವರು ನಿರ್ದೇಶಿಸಿದರು.
ಕುಡಿಯುವ ನೀರು ಸಂಬಂಧಿತ ಜಲಜೀವನ ಮಿಷನ್ ಯೋಜನೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಸಾಕಷ್ಟು ಬಾರಿ ಎಚ್ಚರಿಕೆ ನೀಡಿ, ಎಲ್ ಆ್ಯಂಡ್ ಟಿ ಕಂಪನಿಗೆ ಈಗಾಗಲೇ ರೂ. 30 ಕೋಟಿ ದಂಡವಿಧಿಸಲಾಗಿದೆ. ಮೇ ಅಂತ್ಯದೊಳಗೆ 28 ಗ್ರಾಮಗಳಿಗೆ ಯೋಜನೆಯಡಿ ಕುಡಿಯುವ ನೀರು ಸರಬರಾಜು ಮಾಡಲು ಕ್ರಮವಹಿಸಿದ್ದಾರೆ. ಮಾರ್ಚ 2027 ರವೆರೆಗೆ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಜಲಜೀವನ ಮಿಷನ್ ಕಾಮಗಾರಿಗಳು ಗುಣಮಟ್ಟದಿಂದ ಮತ್ತು ಒಪ್ಪಂದದಂತೆ ಅನುಷ್ಠಾನಗೊಳ್ಳುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಮತ್ತು ಸರಿಯಾಗಿ ಮೇಲುಸ್ತುವಾರಿ ವಹಿಸಬೇಕೆಂದು ಸಚಿವರು ಸೂಚನೆ ನೀಡಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 