ಕೊಚ್ಚಿ, 25 -ಇಲ್ಲಿಗೆ ಸಮೀಪದ ಅಂಗಮಲಿ ಸಮೀಪದ ಪ್ರಮುಖ ಜಂಕ್ಷನ್ನಲ್ಲಿ ಆಟೋ ರಿಕ್ಷಾವೊಂದು ಖಾಸಗಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಮಹಿಳೆಯರು, ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಆಟೋ ಚಾಲಕನನ್ನು ಅಂಗಮಲಿಯ ಜೋಸೆಫ್ ಪನಂಗಟ್ಟು ಪರಂಬಿಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ಮಹಿಳೆಯರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸಾರ್ವಜನಿಕರು ನಜ್ಜುಗಜ್ಜಾದ ಆಟೋದಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.