ವಿಬಿಹಿಜಿ ರಾಮ್‌ಹಿಜಿ ಯೋಜನೆ ಸೌಲಭ್ಯ ಪಡೆದುಕೊಳ್ಳಿ
Avail the benefits of the VBHIJI-RAMHIJI scheme.
ಲೋಕದರ್ಶನ ವರದಿ
ವಿಜಯಪುರ 01 : ಗ್ರಾಮೀಣ ಜನರಿಗೆ ಉದ್ಯೋಗದ ಜೊತೆಗೆ ಸುಸ್ಥಿರ ಜೀವನೋಪಾಯ ಕಲ್ಪಿಸುವ ನಿಟ್ಟಿನಲ್ಲಿ ವಿಬಿಹಿಜಿ ರಾಮ್‌ಹಿಜಿ ಯೋಜನೆಯು ಮಹತ್ವದ ಪಾತ್ರ ವಹಿಸುತ್ತಿದ್ದು, ಅರ್ಹ ಪ್ರತಿಯೊಬ್ಬರೂ ಯೋಜನೆಯ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅವರು ಹೇಳಿದರು. ವಿಜಯಪುರ ತಾಲೂಕಿನ ಆಹೇರಿ ಹಾಗೂ ಕುಮಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಹಿಜಿ ರಾಮ್‌ಹಿಜಿ ಯೋಜನೆಯಡಿ ನಡೆದ ಕ್ಷೇತ್ರ ಭೇಟಿ ನೀಡಿ ಕಾಮಗಾರಿಗಳ ಪರೀಶೀಲಿಸಿ ಹಾಗೂ ಕೂಲಿಕಾರರೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಮಿಕರನ್ನು ಸನ್ಮಾನಿಸಿದ ಅವರು, ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಅವರ ಶ್ರಮವನ್ನು ಗೌರವಿಸಿ, ಗ್ರಾಮೀಣಾಭಿವೃದ್ಧಿಯಲ್ಲಿ ಕೂಲಿಕಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರತಿ ದಿನ ಕೂಲಿ 382 ರೂ. ಇದ್ದು, ವರ್ಷದಲ್ಲಿ ಪ್ರತಿ ಕುಟುಂಬಕ್ಕೆ 125 ದಿನಗಳ ಉದ್ಯೋಗ ದೊರೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಜನರು ಯೋಜನೆಯಡಿ ಲಭ್ಯವಿರುವ ಉದ್ಯೋಗಾವಕಾಶವನ್ನು ಬಳಸಿಕೊಂಡು ತಮ್ಮ ಆರ್ಥಿಕ ಸ್ಥಿತಿ ಸದೃಢಪಡಿಸಿಕೊಳ್ಳಬೇಕು ಎಂದರು.
ನಂತರ ಕುಮಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗೋಡು ಕೆರೆಯ ಪುನಶ್ಚೇತನ ಕಾಮಗಾರಿಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಕೂಲಿಕಾರರ ವೇತನ ಪಾವತಿಗೆ ಸಂಬಂಧಿಸಿದಂತೆ ಯಾವುದೇ ಅನಗತ್ಯ ವಿಳಂಬವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 