ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ; ಮಕ್ಕಳ ಜ್ಞಾನಶಕ್ತಿಗೆ ಪ್ರೋತ್ಸಾಹ ಅಗತ್ಯ
Awards for talented students; encouragement needed for children's intellectual potential
ರಾಣಿಬೇನೂರ 1: ಇಂದಿನ ಮಕ್ಕಳಲ್ಲಿ ಅಪಾರ ಜ್ಞಾನಶಕ್ತಿ ಅಡಗಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಜವಾಬ್ದಾರಿ ಪಾಲಕರು, ಶಿಕ್ಷಕರು, ್ಠದಿಷಿಹ್ಠಿದ್ಠ್ಲೀ್ಪಷ್ಛ್ದ ಹಾಗೂ ಸಮಾಜದ ಮೇಲಿದೆ ಎಂದು ಕೊಡಿಯಾಳ ಹೊಸಪೇಟೆ ಪುಣ್ಯಕೋಟಿ ಮಠದ ಜಗದೀಶ್ವರ ಮಹಾಸ್ವಾಮೀಜಿ ಹೇಳಿದರು. ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಿರೇಮಠ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಶೈಕ್ಷಣಿಕ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.
ಸಮಾಜಸೇವೆಯನ್ನು ಜೀವನದ ಧ್ಯೇಯವನ್ನಾಗಿಸಿಕೊಂಡಿರುವ ವಿ.ಎಸ್. ಹಿರೇಮಠ ಅವರು ಸರ್ಕಾರಿ ಸೇವೆಯಿಂದ ನಿವೃತ್ತಿಯಾದ ಬಳಿಕವೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಜಿಪಂ ಸದಸ್ಯ ಸಂತೋಷಕುಮಾರ ಪಾಟೀಲ, ಸಮಾಜಸೇವೆ ಸವಾಲಿನ ಕಾರ್ಯವಾಗಿದ್ದು, ಹಿರೇಮಠ ಅವರ ಸೇವಾ ಮನೋಭಾವ ಇತರರಿಗೆ ಮಾದರಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ವಿ.ಎಸ್. ಹಿರೇಮಠ, ನಿವೃತ್ತಿಯ ನಂತರವೂ ಸಮಾಜಕ್ಕೆ ಸೇವೆ ಸಲ್ಲಿಸುವ ಉದ್ದೇಶದಿಂದ ಟ್ರಸ್ಟ್ ಸ್ಥಾಪಿಸಲಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದೇ ಸಂಸ್ಥೆಯ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ದಿಂಡದಹಳ್ಳಿ ತಪೋಮಂದಿರದ ಪಶುಪತಿ ಶಿವಾನಂದ ಶಿವಾಚಾರ್ಯರು ಆಶೀರ್ವಚನ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ, ಹಾವೇರಿ ಎಂ.ಆರ್.ಎಂ. ಕಾಲೇಜಿನ ಪ್ರಾಚಾರ್ಯ ಡಾ. ರಾಮಮೋಹನರಾವ್ ಹಾಗೂ ಪ್ರವಚನಕಾರ ಗದಿಗೆಯ್ಯ ಶಾಸ್ತ್ರಿಗಳು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವೇದಿಕೆಯಲ್ಲಿ ವಾಗೀಶಯ್ಯ ಭಿಕ್ಷಾವರ್ತಿಮಠ, ಕಸಾಪ ಅಧ್ಯಕ್ಷ ಪ್ರಭಾಕರ ಶಿಗ್ಗಿ, ಮಂಜು ಮೈಸೂರು, ವಾಸಣ್ಣ ಕುಸಗೂರು, ವಿದ್ಯಾಶ್ರೀ ಹಿರೇಮಠ, ಕವಿತಾ ಹಿರೇಮಠ, ಸಿಆರ್ಿ ಮಂಜುನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪರಮೇಶಯ್ಯ ಮಠ ಪ್ರಾರ್ಥನೆ ನೆರವೇರಿಸಿದರು. ಜಿ.ಜಿ. ಹೊಟ್ಟಿಗೌಡರ್ ಪರಿಚಯ ಮಾಡಿಕೊಟ್ಟರೆ, ಶಿಕ್ಷಕ ಜಗದೀಶ ಮಳೀಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ನಿತ್ಯಾನಂದ ಕುಂದಾಪುರ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ಜನನಿ ಜಾನಪದ ಕಲಾತಂಡದವರಿಂದ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ವೇಳೆ ತಾಲೂಕಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ 54 ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಗೌರವಿಸಲಾಯಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 