ಸಾಮಾಜಿಕ ಸೇವೆ ಮತ್ತಷ್ಟು ವಿಸ್ತರಿಸಲು ಪ್ರಶಸ್ತಿಗಳು ಪ್ರೇರಣೆ: ರಾಜಶೇಖರ್
Awards inspire further expansion of social service: Rajashekhar
ಕೆಎಸ್ಜೆವೈ ರಾಜ್ಯ ಪ್ರಶಸ್ತಿಗೆ ಪತ್ರಕರ್ತ ರಾಜಶೇಖರ್ ಗೌರವ
ಬಳ್ಳಾರಿ, ಆ.11: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾಧ್ಯಕ್ಷ ರಾಜಶೇಖರ್ ಅಲಿಯಾಸ್ ಕುರಿಹಟ್ಟಿ ರಾಜಣ್ಣ ಅವರಿಗೆ ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್ (ರಿ) ವತಿಯಿಂದ ಕೆಎಸ್ಜೆವೈ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ಹೋಟೆಲ್ ಗೇಟ್ ವೇ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್ (ರಿ) ವತಿಯಿಂದ ನಡೆದ ರಾಷ್ಟ್ರೀಯ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜಶೇಖರ್, ಸಂಘ-ಸಂಸ್ಥೆಗಳು ತಮ್ಮ ಕಾರ್ಯಕ್ಷೇತ್ರ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವುದು ಮತ್ತಷ್ಟು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಪ್ರೇರಣೆ ನೀಡುತ್ತದೆ.
ಪ್ರಶಸ್ತಿ ಹಾಗೂ ಸನ್ಮಾನಗಳು ನಮ್ಮ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಅವುಗಳನ್ನು ಗೌರವದಿಂದ ಸ್ವೀಕರಿಸಿ ಸಾರ್ವಜನಿಕ ಸೇವೆಗೆ ಇನ್ನಷ್ಟು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಐಜೆಯು ರಾಜ್ಯಾಧ್ಯಕ್ಷೆ ಜಾನಕಿ ಮೋಹನ್ ತೆಲಂಗಾಣ, ಕರ್ನಾಟಕ ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ, ಅಂಜುಮ್ ಖಾನ್, ಐಜೆಯು ಪ್ರಧಾನ ಕಾರ್ಯದರ್ಶಿ ಡಿ. ಸೋಮು ಸುಂದರ್, ಮಾಜಿ ರಾಷ್ಟ್ರೀಯ ಅಧ್ಯಕ್ಷ ದೇವಲ ಪಾಲ್ಲಿ ಅಮರ್, ಎಸ್.ಎನ್. ಸಿನ್ಹಾ ಸೇರಿದಂತೆ 23 ರಾಜ್ಯಗಳ ಪತ್ರಕರ್ತರ ಸಂಘಟನೆಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಕಾರ್ಯಕಾರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಉಸ್ತುವಾರಿಯನ್ನು ಕರ್ನಾಟಕ ಸ್ಟೇಟ್ ಜರ್ನಲಿಸ್ಟ್ ಯೂನಿಯನ್ (ರಿ) ರಾಜ್ಯಾಧ್ಯಕ್ಷ ಎಂ. ಜಾನಕಿ ಮೋಹನ್ ಹಾಗೂ ರಾಜ್ಯ ಘಟಕದ ಪದಾಧಿಕಾರಿಗಳು ವಹಿಸಿದ್ದರು. ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್ ಎರಗುಡಿ, ಕಾರ್ಯಾಧ್ಯಕ್ಷ ರವಿ ನೆಟ್ಟ ಕಲ್ಲಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 