ಲೋಕದರ್ಶನ ವರದಿ
ಗೋಕಾಕ: ಇಂದಿನ ಸ್ಪಧರ್ಾತ್ಮಕ ಯುಗದಲ್ಲಿ ಯುವಜನಾಂಗ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾಗಿ ತಮ್ಮ ಬದುಕನ್ನು ರೂಪಿಸಿಕೊಳ್ಳಿರೆಂದು ಸಿಂಡಿಕೇಟ್ ಬ್ಯಾಂಕಿನ ಚಿಕ್ಕೋಡಿ ವಿಭಾಗಿಯ ವ್ಯವಸ್ಥಾಪಕ ಶ್ರೀನಿವಾಸರಾವ ಹೇಳಿದರು.
ಶನಿವಾರದಂದು ನಗರದ ಶೂನ್ಯ ಸಂಪಾದನಾ ಮಠದ ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜಿನಲ್ಲಿ ಸಿಂಡಿಕೇಟ್ ಬ್ಯಾಂಕಿನವರ ಹಮ್ಮಿಕೊಂಡ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯುವಜನಾಂಗ ಸ್ಪಧರ್ಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿ, ಅವುಗಳಲ್ಲಿ ಪಾಲ್ಗೊಳ್ಳಬೇಕು. ಬ್ಯಾಂಕಿಂಗ ಕ್ಷೇತ್ರದಲ್ಲಿ ಹೆಚ್ಚಿನ ಉದ್ಯೋಗದ ಅವಕಾಶಗಳಿದ್ದು ಅವುಗಳತ್ತ ಒಲವನ್ನು ಹೆಚ್ಚಿಸಿಕೊಳ್ಳುವುದರೊಂದಿಗೆ ಪರೀಕ್ಷೆಗಲ್ಲಿ ತೆಗರ್ೆಡೆ ಹೊಂದಿ, ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಿರೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾಥರ್ಿಗಳಿಗೆ ಬ್ಯಾಂಕಿನ ಮಾದರಿ ಪರೀಕ್ಷೆಯನ್ನು ನಡೆಸಿ ಹೆಚ್ಚು ಅಂಕಪಡೆದವರಿಗೆ ಪ್ರಶಸ್ತಿ ಪತ್ರದೊಂದಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಬಿಸಿಎ ಕಾಲೇಜಿನ ಪ್ರಾಚಾರ್ಯ ಜಿ.ಸಿ.ಚೌಗಲಾ, ಚಿಕ್ಕೋಡಿ ಹಾಗೂ ಗೋಕಾಕ ಶಾಖೆಗಳ ಸಿಂಡಿಕೇಟ್ ಬ್ಯಾಂಕಿನ ವ್ಯವಸ್ಥಾಪಕರಾದ ಸೂರ್ಯಮೋಹನಸಿಂಗ್, ಬೋರಾನುದ್ದಿನ್ ಜಮಖಂಡಿ, ಉಪನ್ಯಾಸಕರು ಇದ್ದರು.