ಬೆಳಗಾವಿ: 22 :ಜಿಲ್ಲಾ ಶಾಖೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮಣ್ಣೂರ ಅವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 21 ರಂದು ಬೆಳಗಾವಿ ಗ್ರಾಮೀಣ ವಲಯದ 80 ಜನ ಸರಕಾರಿ ಶಾಲಾ ಶಿಕ್ಷಕರಿಗೆ ಬೆಳಗಾವಿ ಸೆಂಟ್ ಜೋಸೆಫ್ ಡಿ.ಎಡ್. ಕಾಲೇಜ ಕ್ಯಾಂಪ್ನಲ್ಲ್ಲಿ ಪ್ರಥಮ ಚಿಕಿತ್ಸೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಚೇರಮನ್ನರಾದ ಅಶೋಕ.ವಿ.ಬದಾಮಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪ್ರಾತ್ಯಕ್ಷಿಕೆಗಳ ಮೂಲಕ ಪ್ರಥಮ ಚಿಕಿತ್ಸೆಯ ಮಹತ್ವ ಹಾಗೂ ಅವಶ್ಯಕತೆಗಳ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳಾದ ಮಲ್ಲಿಕಾಜರ್ುನ ನಿವರ್ಾಣಿ, ಪ್ರಾಣೇಶ ನರಸಿಂಹರಾವ ಹಾಗೂ ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಆರ್.ಆರ್. ಸದಲಗಿ ಮತ್ತಿತರರು ಉಪಸ್ಥಿತರಿದ್ದರು.