ಜಾಗೃತಿ ಅರಿವು ಸಪ್ತಾಹ- 2025
Awareness Week- 2025
ಬೆಳಗಾವಿ 29: ಕರ್ನಾಟಕ ಲೋಕಾಯುಕ್ತ ಬೆಳಗಾವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಯೋಗದೊಂದಿಗೆ ಬುಧವಾರ (ಅ.29) ನಗರದ ಶ್ರೀ ಎಸ್ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಸಭಾ ಭವನದಲ್ಲಿ ಜಾಗೃತಿ ಅರಿವು ಸಪ್ತಾಹ- 2025 ಕಾರ್ಯಕ್ರಮ ಜರುಗಿತು. ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ “ಪ್ರತಿಯೊಬ್ಬ ಸರಕಾರಿ ನೌಕರನೂ ಸೇವೆಗೆ ಸೇರಿದಾಗಿನಿಂದ ಚಾರಿತ್ರ್ಯ ಹೀನರಾಗಿ ಕೊಳಚೆಯ ಮೇಲಿನ ನೊಣದಂತೆ ಬದುಕದೆ, ಪ್ರಾಮಾಣಿಕವಾಗಿ ಮತ್ತು ಪಾರದರ್ಶಕ ಸೇವೆ ಸಲ್ಲಿಸುವ ಮೂಲಕ ಸಿಹಿ ನೀಡುವ ಜೇನು ಹುಳುವಿನಂತೆ ಸಾರ್ಥಕ ಜೀವನ ಸಾಗಿಸಬೇಕು” ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಸಿದ್ದ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಹಿರಿಯ ಕಾನೂನು ಸಲಹೆಗಾರ ರಾಜೇಶ ಜಂಬಗಿ ಅವರು ಮಾತನಾಡಿ ಸಂವಿಧಾನ ಬದ್ಧವಾಗಿ ಎಲ್ಲ ಸರ್ಕಾರಿ ನೌಕರರು ಪಾರದರ್ಶಕ ರೀತಿಯಿಂದ ಸೇವೆ ಸಲ್ಲಿಸುವಂತೆ ಹಾಗೂ ಮೌಲ್ಯಯುತ ಜೀವನ ನಡೆಸುವಂತೆ ಕರೆ ನೀಡಿದರು.
ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ನಿರ್ದೇಶಕ ರಾಜಗೋಪಾಲ ಅವರು ಮಾತನಾಡಿ ಸರ್ ಎಮ್. ವಿಶ್ವೇಶ್ವರಯ್ಯ ಮತ್ತು ಕವಿ ಶ್ರೀ ಡಿ. ವಿ. ಗುಂಡಪ್ಪ (ಡಿವಿಜಿ) ರವರಂತೆ ನಡೆ ಮತ್ತು ನುಡಿಯಲಿ ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡಲ್ಲಿ ಸರ್ಕಾರಿ ಸೇವೆ ಸಲ್ಲಿಸಿದ್ದು ಸಾರ್ಥಕವಾಗುತ್ತದೆಂದು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಲೋಕಾಯುಕ್ತ ಬೆಳಗಾವಿ ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಅವರು ಮಾತನಾಡಿ ಜಾಗೃತಿ ಅರಿವು ಸಪ್ತಾಹ ಆಚರಿಸುವದರ ಹಿನ್ನಲೆಯ ಬಗ್ಗೆ ಕೇಂದ್ರ ವಿಚಕ್ಷಣಾ ದಳ, ಕರ್ನಾಟಕ ಲೋಕಾಯುಕ್ತ ಸಂಸ್ಥೆಗಳನ್ನು ಉದಾಹರಿಸಿ ಮಾತನಾಡಿದರು ಅಲ್ಲದೆ ಕೌಟಿಲ್ಯನ ಅರ್ಥಶಾಸ್ತ್ರದ ನುಡಿಗಳನ್ನು ಉಲ್ಲೇಖಿಸಿ “ಪ್ರತಿಯೊಬ್ಬ ನೌಕರನು ತಮ್ಮ ಆತ್ಮಸಾಕ್ಷಿಯಾಗಿ ಜಾಗೃತಿ, ಆತ್ಮ ಅರಿವು, ವ್ಯಕ್ತಿಗತ ಅನುಭವದ ಹಿನ್ನಲೆಯಲ್ಲಿ ಸೇವೆ ಸಲ್ಲಿಸಿದಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟುವದು ಅಷ್ಟೆ ಅಲ್ಲ ಸಂಪೂರ್ಣ ನಿರ್ಮೂಲನೆ ಮಾಡಬಹುದಾಗಿದೆ. ಪ್ರತಿಯೊಬ್ಬ ಸರ್ಕಾರಿ ನೌಕರನು ಸಮಯ ಪಾಲನೆ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು ಸಾರ್ವಜನಿಕರಿಗೆ ಸಮರ್ಕ ಸೇವೆ ನೀಡುವಂತೆ ಕರೆ ನೀಡಿದರು.ಈ ಸಂದರ್ಭದಲ್ಲಿ ಜಾಗೃತಿ ಅರಿವು ಸಪ್ತಾಹ-2025 ರ (27-10-2025 ರಿಂದ 02-11-2025 ರ ವರೆಗೆ) ಪ್ರಯುಕ್ತ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಬೆಳಗಾವಿ ಹನುಮಂತರಾಯ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಎಚ್. ಡಿ. ಕೊಳೆಕರ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಮಹೇಶ ಕುಮಾರ, ಲೋಕಾಯುಕ್ತ ಸಂಸ್ಥೆ, ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಎಸ್. ನಿಜಲಿಂಗಪ್ಪ, ಸಕ್ಕರೆ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 