ಮಾದಕ ದ್ರವ್ಯಗಳ ವಿರುದ್ಧ ಜಾಗೃತಿ: ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯಿಂದ ಅರಿವು ಕಾರ್ಯಕ್ರಮ
Awareness against drugs: Police department's awareness program for students
ಕೊಲ್ಹಾರ 23 : ತಾಲೂಕಿನ ಕೂಡಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಕೂಡಗಿ ಪೊಲೀಸ್ ಠಾಣೆಯ ಪಿಎಸ್‌ಐ ಯತೀಶ್ ಕೆ.ಎನ್., ಮಾತನಾಡಿ ಯುವ ಸಮುದಾಯವು ಮಾದಕ ದ್ರವ್ಯಗಳ ದಾಸರಾಗಿ ತಮ್ಮ ಉಜ್ವಲ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವ್ಯಸನಗಳಿಂದ ದೂರ ಉಳಿದು ಉತ್ತಮ ಸಾಮಾಜಿಕ ಜೀವನ ರೂಪಿಸಿಕೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಯುವಜನತೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ಮಾದಕ ದ್ರವ್ಯ ಸೇವನೆಯು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
ಮಾದಕ ದ್ರವ್ಯಗಳ ಸೇವನೆ, ಮಾರಾಟ ಮತ್ತು ಸಂಗ್ರಹಣೆ ಕಾನೂನು ಬಾಹಿರವಾಗಿದ್ದು, ಈ ಕೃತ್ಯಗಳಲ್ಲಿ ತೊಡಗುವವರಿಗೆ ಕನಿಷ್ಠ 10 ವರ್ಷಗಳ ಜೈಲು ಶಿಕ್ಷೆಯವರೆಗೆ ಅವಕಾಶವಿದೆ ಎಂದು ಅವರು ತಿಳಿಸಿದರು. ರಾಜ್ಯವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದೆ ಎಂದರು.ಇತ್ತೀಚಿನ ದಿನಗಳಲ್ಲಿ ಮಾದಕ ದ್ರವ್ಯ ಮಾರಾಟಗಾರರು ಯುವಜನರನ್ನು ಗುರಿಯಾಗಿಸಿಕೊಂಡಿದ್ದು, ಅನೇಕರು ತಿಳಿಯದೆ ಈ ಜಾಲದಲ್ಲಿ ಸಿಲುಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ನೇರವಾಗಿ ಯಾರಾದರೂ ಬೆದರಿಕೆ ಹಾಕಿದರೆ, ಬ್ಲಾಕ್ಮೇಲ್ ಮಾಡಿದರೆ ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಬಳಿಕ ಎಂ.ಎಸ್. ವೀರಗಡ್ಡಿಮಠ ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯಗಳ ಸೇವನೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿವರವಾಗಿ ಮಾಹಿತಿ ನೀಡಲಾಯಿತು.
ಯುವಜನತೆ ವ್ಯಸನಗಳಿಂದ ದೂರ ಉಳಿದು ಆರೋಗ್ಯಕರ ಜೀವನ ನಡೆಸಬೇಕು ಎಂದರು ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಬಿ. ದೇಸಾಯಿ, ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಮುಖ್ಯಗುರು ಎ.ಡಿ. ಸಾಲೋಡಗಿ, ಎಂ.ಎಸ್. ವೀರಗಡ್ಡಿಮಠ, ಸತೀಶ್ ಎಚ್.ಎಂ., ಎನ್.ಎಲ್. ಚಬನೂರ, ಉಪನ್ಯಾಸಕರಾದ ವಿ.ಜಿ. ಕಿವುಡ ಜಾಡರ, ಎಂ.ಎಚ್. ಪಾಟೀಲ, ಸಿಬ್ಬಂದಿ, ಪೊಲೀಸ್ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 