ಬಂಜೆತನ ನಿವಾರಣೆ ಕುರಿತು ಜಾಗೃತಿ ಶಿಬಿರ
ಶೇಡಬಾಳ 10: ಮಿರಜದ ಸಚಿನ ಆಸ್ಪತ್ರೆಯಲ್ಲಿ ಬರುವ ರವಿವಾರ ದಿ. 15 ರಂದು ಉಚಿತ ಮಹಿಳೆಯರ ಲೈಂಗಿಕ ರೋಗಗಳು ಹಾಗೂ ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಿರಜದ ಖ್ಯಾತ ಸ್ತ್ರೀರೋಗ ತಜ್ಞರಾದ ಡಾ. ಸಚಿನ ಸುಗಣ್ಣವರ ತಿಳಿಸಿದ್ದಾರೆ.
ಮಿರಜದಲ್ಲಿನ ಸಚಿನ ಆಸ್ಪತ್ರೆಯು ಬಂಜೆತನ ನಿವಾರಣೆ ಹಾಗೂ ಮಹಿಳೆಯರ ಲೈಂಗಿಕ ರೋಗಗಳ ನಿವಾರಣೆ ಕುರಿತು ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಏರ್ಪಡಿಸಿ ತನ್ನದೇ ಆದ ರೀತಿಯಲ್ಲಿ ಸಾಮಾಜಿಕ ಕಾರ್ಯವನ್ನು ಕೈಗೊಳ್ಳುತ್ತಿದೆ.
ಈ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡ ಅತ್ಯಾಧುನಿಕ ಯಂತ್ರೋಪಕರಣಗಳು ಜತೆಗೆ ಆಸ್ಪತ್ರೆಯು ಹೈಟೆಕ್ ಸೌಲಭ್ಯವನ್ನು ಹೊಂದಿದೆ. ಪ್ರತಿ ತಿಂಗಳು ಮಹಿಳೆಯರ ಎಲ್ಲ ಲೈಂಗಿಕ ರೋಗಗಳ ಮತ್ತು ಬಂಜೆತನ ನಿವಾರಣೆ ಹಾಗೂ ಉಪಚಾರ ಶಿಬಿರವನ್ನು ಉಚಿತವಾಗಿ ಹಮ್ಮಿಕೊಳ್ಳುತ್ತಿದೆ.
ಈ ಶಿಬಿರದಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಅನೇಕ ರೋಗಿಗಳು ಭಾಗ ವಹಿಸಿ ಶಿಬಿರದ ಲಾಭವನ್ನು ಪಡೆದುಕೊಂಡಿದ್ದಾರೆ. ಅದರಂತೆ ಲೈಂಗಿಕ ರೋಗಗಳಿಂದ ಬಳಲುವ ಹಾಗೂ ಮಕ್ಕಳಾಗದೆ ಇರುವ ದಂಪತಿಗಳು ಈ ಶಿಬಿರದ ಲಾಭ ಪಡೆದುಕೊಳ್ಳಬೇಕು.
ರವಿವಾರ ದಿ. 15 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಜರುಗುವ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಉಪಚಾರ ಮತ್ತು ಕಡಿಮೆ ಖರ್ಚಿನಲ್ಲಿ ಶಸ್ತ್ರಕ್ರೀಯೆ ಮಾಡಲಾಗುವುದು. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಡಾ. ಸಚಿನ ಸುಗಣ್ಣವರ ಕರೆ ನೀಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 