ಮಹಿಳೆಯರಿಗೆ ಪೌಷ್ಟಿಕ ಆಹಾರದ ಮಹತ್ವ ಬಗ್ಗೆ ಅರಿವು ಅಭಿಯಾನ
Awareness campaign for women about the importance of nutritious food
ಲಕ್ಕುಂಡಿ 23; ಎಲ್ಲಿ ಹೆಣ್ಣು ಮಕ್ಕಳನ್ನ ಗೌರವಿಸುತ್ತಾರೋ ಅಲ್ಲಿ ದೇವರು ನೆಲೆಸಿರುತ್ತಾನೆ . ಭಾರತೀಯ ನಾರಿಯರ ನಡೆ-ನುಡಿ ಸಂಸ್ಕೃತಿ ಸಂಪ್ರದಾಯ ಇಡೀ ಜಗತ್ತಿಗೆ ಮಾದರಿಯಾಗಿದೆ ಈ ಹಿನ್ನೆಲೆಯಲ್ಲಿ ಮಹಿಳೆಯರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡ ಸ್ವಸ್ಥ ನಾರಿ ಶಸಕ್ತ ಪರಿವಾರ ಇದೊಂದು ಮಹಿಳಾ ಜನಪರ ಅರಿವಿನ ಅಭಿಯಾನವಾಗಿದ್ದು ಇದರ ಸದುಪಯೋಗವನ್ನ ಮಹಿಳೆಯರು ವಿಶೇಷವಾಗಿ ವಿದ್ಯಾರ್ಥಿನಿಯರು ಗರ್ಭಿಣಿಯರು ತಾಯಂದಿರು ಹಿರಿಯರು ಪಡೆದುಕೊಳ್ಳಬೇಕೆಂದು ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ರಾಜೇಂದ್ರ ಗಡಾದ ಹೇಳಿದರು.
ಶ್ರೀ ಅನ್ನದಾನೇಶ್ವರ ಮಠದ ಸಭಾಭವನದಲ್ಲಿ ಜರುಗಿದ ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೆಂಚಪ್ಪ ಪೂಜಾ ರವರು ಜ್ಯೋತಿ ಬೆಳಗಿಸುವ ಮೂಲಕ ಅಭಿಯಾನವನ್ನು ಉದ್ಘಾಟಿಸಿ ಇದೊಂದು ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗೆ ಹಮ್ಮಿಕೊಂಡ ಅಭಿಯಾನವಾಗಿದ್ದು ಸ್ವಯಂ ಪ್ರೇರಿತರಾಗಿ ಸಾರ್ವಜನಿಕರು ಇದರಲ್ಲಿ ಭಾಗವಹಿಸಿ ತಮ್ಮ ಆರೋಗ್ಯದ ಬಗ್ಗೆ ಚಿಕಿತ್ಸೆಯನ್ನ ಪಡೆಯಲು ಮುಂದಾಗಬೇಕೆಂದರು. ಮುಖ್ಯ ಅತಿಥಿಗಳಾಗಿದ್ದ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೀತ್ ಖೋನಾ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಮಹಿಳೆಯರ ಆರೋಗ್ಯ ಸಂರಕ್ಷಣೆಗಾಗಿ ಈ ಅಭಿಯಾನ ಪೂರಕವಾಗಿದ್ದು ರಕ್ತದೊತ್ತಡ ಮದುಮೇಹ, ಕ್ಯಾನ್ಸರ್, ಕ್ಷಯರೋಗ, ಕಣ್ಣು, ಗಂಟಲು ಮೂಗು ತಪಾಸಣೆ, ರಕ್ತ ಹೀನತೆ ಪರೀಕ್ಷೆ ಸೇರಿದಂತೆ ಹಲವಾರು ಕಾಯಿಲೆಗಳ ತಪಾಸನೆಯನ್ನು ಅಭಿಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಆರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಆರೋಗ್ಯ ನೀರೀಕ್ಷಣಾಧಿಕಾರಿ ಸಿದ್ದಪ್ಪ ಲಿಂಗದಾಳ್ ಅವರು ಅಭಿಯಾನದ ಉದ್ದೇಶ ಮಹತ್ವ ಕುರಿತು ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಹಿರಿಯ ಆರೋಗ್ಯ ಸುರಕ್ಷಾಧಿಕಾರಿಯಾದ ಶಾಂತ ನೂಕಾಪುರ, ಸ್ವಾಗತಿಸಿದರು ಕೊನೆಯಲ್ಲಿ ಮುತ್ತಪ್ಪ ಹಟ್ಟಿಮನಿ ವಂದಿಸಿದರು.
ಕಾರ್ಯಕ್ರಮದಲ್ಲಿ ಸರೋಜಾ ಕಟ್ಟಿಮನಿ, ಎಸ್.ಬಿ ಗಡಾದ, ಚಂದ್ರ್ರಭಾ ತೋಟದ ಗಂಗಮ್ಮ ಕುಂಬಾರ ಸೇರಿದಂತೆ ಆರೋಗ್ಯ ಇಲಾಖೆಯ ಸಮಸ್ತ ಸಿಬ್ಬಂದಿ ವರ್ಗದವರು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 