ಬಾಲಕಾರ್ಮಿಕ ನಿರ್ಮೂಲನೆಗೆ ಜಾಗೃತಿ ಅಭಿಯಾನ
Awareness campaign to eliminate child labor
ಲೋಕದರ್ಶನ ವರದಿ
ಬಾಗಲಕೋಟೆ 30: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ರೀಚ್ ಮತ್ತು ಜಸ್ಟಿಸ್ ಫಾರ್ ಚಿಲ್ಡ್ರನ್ (ಎಖಅ) ಸಹಯೋಗದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ವ್ಯಾಪಕ ಜಾಗೃತಿ ಅಭಿಯಾನ ನಡೆಯಿತು. ಜಿಲ್ಲಾ ಬಾಲಕಾರ್ಮಿಕ ಅಧಿಕಾರಿ ರಮೇಶ್ ಸುಂಬಡ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವುದು ಕಾನೂನುಬಾಹಿರವಾಗಿದ್ದು, 14 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕರ ಉದ್ಯೋಗಗಳಲ್ಲಿ ನೇಮಿಸುವುದೂ ನಿಷೇಧಿತವಾಗಿದೆ ಎಂದು ಹೇಳಿದರು. ಬಾಲಕಾರ್ಮಿಕರ ಬಗ್ಗೆ ಮಾಹಿತಿ ಇದ್ದರೆ ತಕ್ಷಣ 1098 ಮಕ್ಕಳ ಸಹಾಯವಾಣಿ ಅಥವಾ 112 ತುರ್ತು ಸೇವೆಗೆ ಸಂಪರ್ಕಿಸಲು ಅವರು ಮನವಿ ಮಾಡಿದರು. ರೀಚ್ ಸಂಸ್ಥೆಯ ನಿರ್ದೇಶಕ ಜಿ.ಎನ್. ಸಿಂಹ ಸೇರಿದಂತೆ ವಿವಿಧ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ, ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳು ಹಾಗೂ ಸಾರ್ವಜನಿಕರ ಸಹಕಾರದ ಅಗತ್ಯತೆಯ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ರೀಚ್ ಸಂಸ್ಥೆಯ ಸಿಬ್ಬಂದಿ ಹಾಗೂ ಯಶೋಧಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 