ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ಅರಿವು ಕೇಂದ್ರಗಳ ಪ್ರಾರಂಭ
Awareness centers launched for the benefit of students
ಹಾನಗಲ್ 24: ಜ್ಞಾನ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಅರಿವು ಕೇಂದ್ರಗಳನ್ನು ತೆರೆಯಲಾಗಿದೆ. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಈ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.
ಹರವಿ ಗ್ರಾಮದಲ್ಲಿ ಅರಿವು ಕೇಂದ್ರ ಉದ್ಘಾಟಿಸಿದ ಅವರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯಿಂದ ಅರಿವು ಯೋಜನೆ ಜಾರಿಗೊಳಿಸಿದೆ. ಕೇಂದ್ರಗಳಲ್ಲಿ ದಿನಪತ್ರಿಕೆ, ಕಥೆ, ಸಾಹಿತ್ಯದ ಪುಸ್ತಕಗಳಿದ್ದು ಸ್ಪರ್ಧಾತ್ಮಕ ವಿಷಯ ಸಂಬಂಧಿಸಿದ ಪುಸ್ತಕಗಳನ್ನು ಸಹ ಒದಗಿಸಲಾಗಿದೆ. ಕೇಂದ್ರದಲ್ಲಿ ಹತ್ತು, ಹಲವು ವಿಷಯ, ಸಂಗತಿಗಳನ್ನು ಮನನ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಗ್ರಾಪಂ ಸದಸ್ಯ ಬಸವರಾಜಪ್ಪ ಭದ್ರಣ್ಣನವರ, ತಾಲೂಕಾ ಶಿಕ್ಷಣ ಸುಧಾರಣಾ ಸಮಿತಿ ಸದಸ್ಯ ಗನಿಪಟೇಲ ಪಾಟೀಲ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಬಿಇಒ ವಿ.ವಿ.ಸಾಲಿಮಠ, ಮುಖಂಡರಾದ ನಾಗರಾಜ ಏರೇಶಿಮಿ, ಸುರೇಶ್ ಏರೇಶಿಮಿ, ಶಂಭುಲಿಂಗಪ್ಪ ಭದ್ರಣ್ಣನವರ, ಶಿವಾನಂದ ಭದ್ರಣ್ಣನವರ, ಚನ್ನಪ್ಪ ಬಾಣದ, ಸಂಗಪ್ಪ ಮಳೆಪ್ಪನವರ, ರವಿ ಭದ್ರಣ್ಣನವರ, ಪುಟ್ಟಪ್ಪ ಹರಿಜನ, ಶೇಕಪ್ಪ ಹರಿಜನ, ಸಂಗಪ್ಪ ಬಾಣದ, ಪ್ರಕಾಶ ಅಂಗಡಿ, ಇಸ್ಮೈಲಸಾಬ ಹರಪನಹಳ್ಳಿ, ಸಂಗಪ್ಪ ತಳವಾರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 