ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ಜಾಗೃತಿ ವಸ್ತುಪ್ರದರ್ಶನ-ಅರಿವು ಕಾರ್ಯಕ್ರಮ
Awareness exhibition-awareness program as part of National Dengue Day
ಹಾವೇರಿ 21: ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಸರ್ವೇಕ್ಷಣ ಘಟಕದಿಂದ ರಾಷ್ಟ್ರೀಯ ಡೆಂಗೀ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಹಾಗೂ ವಸ್ತುಪ್ರದರ್ಶನ ಹಾವೇರಿ ನಗರದ ಡಾ.ಸಂಜಯ ಡಾಂಗೆ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸೋಮವಾರ ಜರುಗಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಎಂಟಮಾಲಜಿಸ್ಟ್ ಶ್ರೀಕಾಂತ ಪಾಟೀಲ ಅವರು ಡೆಂಗೀ ನಿಯಂತ್ರಣ ಕುರಿತು ಉಪನ್ಯಾಸ ನೀಡಿದರು.
ಡಾ.ಸಂಜಯ ಡಾಂಗೆ, ಡಾ.ವಸಂತ, ಡಾ.ಶಿತಲ್, ಜಿಲ್ಲಾ ಏಪಿಡಮಿಯಾಲಜಿಸ್ಟ್ ಡಾ. ಪ್ರೇಮಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ಕ್ಯೂ.ಎಮ್.ಕೋರಲಹಳ್ಳಿ, ಹಿರಿಯ ಪ್ರಯೋಗಶಾಲಾ ತಂತ್ರಜ್ಞಾಧಿಕಾರಿ ಯು. ಪಿ. ಹಿರೇಮಠ, ಸತೀಶ, ಶ್ರೀಮತಿ ಉಷಾ ಇತರರು ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಚಂದ್ರಶೇಖರ ಹಿತ್ತಲಮನಿ ಸ್ವಾಗತಿಸಿದರು. ಕುಶಲ ಕುಂದಗೋಳ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 