ತಾಯಿ-ಮಗುವಿನ ಆರೋಗ್ಯ ಸಂರಕ್ಷಣೆಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ದೇವೇಂದ್ರ್ಪ ಎನ್.
Awareness is essential for safeguarding maternal and child health: Judge Devendrappa N
ಲೋಕದರ್ಶನ ವರದಿ
ಹಾವೇರಿ 07: ಗರ್ಭಧಾರಣೆಯಿಂದ ಮಗುವಿನ ಎರಡನೇ ಹುಟ್ಟುಹಬ್ಬದವರೆಗೆ ಮೊದಲ ಸಾವಿರ ದಿನಗಳು ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ. ಈ ಅವಧಿಯನ್ನು ಸಾಮಾನ್ಯವಾಗಿ ‘ಸುವರ್ಣ 1000 ದಿನಗಳು’ ಎಂದು ಕರೆಯಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿರಾದಾರ ದೇವಿಂದ್ರ್ಪ ಎನ್. ಅವರು ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲ ರಕ್ಷಾ ಭಾರತ ಎನ್.ಜಿ.ಒ, ಶಾಹಿ ಟಕ್ಸ್ಪೋರ್ಟ್, ಸಹಯೋಗದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1000 ದಿನಗಳ ಮಹತ್ವ ಕುರಿತು ಪುನರ್ಮನನ ತರಬೇತಿ ಹಾಗೂ ಪೋಕ್ಸೋ ಕಾಯ್ದೆ, ಮಾನವ ಕಳ್ಳ ಸಾಗಾಣಿಕೆ ತಡೆ, ನ್ಯಾಯಕೀ ಜಾಗೃತಿ, ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ, ಬಾಲ್ಯವಿವಾಹ ನಿಷೇಧ, ವರದಕ್ಷಿಣೆ ನಿಷೇಧ ಕಾಯ್ದೆ, ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ, ಜನಜಾಗೃತಿ , ಜಲ ಸಂರಕ್ಷಣೆ, ಮಕ್ಕಳ ಹಕ್ಕುಗಳ ಬಗ್ಗೆ ಖಾಯಂ ಜನತಾ ನ್ಯಾಯಾಲಯದ ಕುರಿತು ಹಾಗೂ ಎಸ್.ಐ.ಆರ್ ಬಗ್ಗೆ ಎರಡು ದಿನಗಳ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿರ್ಣಾಯಕ ಮತ್ತು ದುರ್ಬಲ ಅವಧಿಯ ಈ ಹಂತದಲ್ಲಿ ತಾಯಿ ಮತ್ತು ಮಕ್ಕಳ ಮರಣ ಮತ್ತು ಅನಾರೋಗ್ಯದ ಕುರಿತು ಬಹಳ ಅಪಾಯವಿರುತ್ತದೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯ ಸಂರಕ್ಷಣೆಗೆ ಬಹಳ ಮುಖ್ಯವಾಗಿದ್ದು, ಪೌಷ್ಠಿಕಾಂಶ ಆಹಾರ ಪದ್ಧತಿ ಬಳಸಬೇಕು. ಹೆಣ್ಣು ಮಕ್ಕಳಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು. ಸಮಾಜದಲ್ಲಿ ಬಾಲ್ಯ ವಿವಾಹ ನಿಷೇಧ, ವರದಕ್ಷಿಣೆ ನಿಷೇಧ ಸೇರಿದಂತೆ ವಿವಿಧ ಕಾನೂನುಗಳ ಬಗ್ಗೆ ತಿಳುವಳಿಕೆ ನೀಡಬೇಕು. ಜಲ ಸಂರಕ್ಷಣೆ, ಎಸ್.ಐ.ಆರ್. ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಅವರು ಪೋಕ್ಸೋ ಕಾಯ್ದೆ, ಮಾನವ ಕಳ್ಳ ಸಾಗಾಣಿಕೆ ತಡೆ, ನ್ಯಾಯಕೀ ಜಾಗೃತಿ, ಜನಜಾಗೃತಿ, ಖಾಯಂ ಜನತಾ ನ್ಯಾಯಾಲಯ, ಎಸ್.ಐ.ಆರ್. ಬಗ್ಗೆ ಉಪನ್ಯಾಸ ನೀಡಿದರು. ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಶೈಲಜಾ ಎಚ್.ವಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೇವತಿ ಹೊಸಮಠ, ಸಹಾಯಕ ಪ್ರಬಂಧಕ ಎನ್.ಎಂ.ದೇವಿಂದ್ರಾ್ಪ, ಕಾನೂನು ನೆರವು ಮುಖ್ಯ ಅಭಿರಕ್ಷಣಾ ವಕೀಲ ವಿ.ಜಿ.ದೊಡ್ಡಗೌಡ್ರ ಇತರರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ 