ಬಾಲ್ಯ ವಿವಾಹ, ಮಕ್ಕಳ ಮೇಲಿನ ಅಪರಾಧಗಳು ಕುರಿತು ಜಾಗೃತಿ ಅವಶ್ಯ
Awareness is needed about child marriage and crimes against children.
ಬೆಳಗಾವಿ, 25 : ಮೈ ಚಾಯ್ಸಸ್ ಫೌಂಡೇಶನ್ ಹೈದರಾಬಾದ್ ( ಆಪರೇಷನ್ ರೆಡ್ ಅಲರ್ಟ್ ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಖಾನಾಪುರ, ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೋಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿ ಸ್ತಾನವನ್ನು ವಹಿಸಿದ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಬಾಯಿ ಮರಾಠಿ ಅವರು ಇಂದಿನ ಸಮಾಜದಲ್ಲಿ ಮಕ್ಕಳ ಭವಿಷ್ಯಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿರುವ ಸಮಸ್ಯೆಗಳಾದ ಬಾಲ್ಯ ವಿವಾಹ, ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ, ಬಾಲ ಗರ್ಭಿಣಿಯರು ಹಾಗೂ ಅಪ್ರಾಪ್ತ ಪ್ರೇಮ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಈ ದುಷ್ಪ್ರವೃತ್ತಿಗಳ ಪರಿಣಾಮವನ್ನು ನೇರವಾಗಿ ಅನುಭವಿಸುವವರು ನಮ್ಮ ಮನೆಯ ಮಕ್ಕಳು ಎಂಬುದನ್ನು ಪ್ರತಿಯೊಬ್ಬ ಪೋಷಕರೂ ಅರಿತುಕೊಳ್ಳಬೇಕಾಗಿದೆ ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾದ ನಂದಾ ಲೋಕೂರ ಅಂಗನವಾಡಿ ಕೇಂದ್ರದ ಹಿರಿಯ ಮೇಲ್ವಿಚಾರಕಿ ಮಾತನಾಡುತ್ತಾ, ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಎಂಬ ಭೀಕರ ಅಪರಾಧ ನಮ್ಮ ಸುತ್ತಮುತ್ತಲೇ ಮೌನವಾಗಿ ನಡೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಉದ್ಯೋಗ, ಉತ್ತಮ ಜೀವನದ ಆಸೆ ತೋರಿಸಿ ಅಮಾಯಕ ಮಕ್ಕಳನ್ನು ಮತ್ತು ಮಹಿಳೆಯರನ್ನು ದುಷ್ಕೃತ್ಯಗಳಿಗೆ ದೂಡುವ ಘಟನೆಗಳು ಹೆಚ್ಚುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಅಜ್ಞಾನ ಮತ್ತು ಬಡತನ ಈ ಕಳ್ಳ ಸಾಗಣಿಕೆಗೆ ಪೂರಕವಾಗುತ್ತಿದೆ ಆದ್ದರಿಂದ ಜಾಗೃತಕರಾಗಿ ವಿವಿಧ ಮಾರ್ಗದಿಂದ ನಡೆಯುವ ದೃಷ್ಕೃತ್ಯಗಳನ್ನು ತಡೆಗಟ್ಟುವಲ್ಲಿ ಕೈಜೋಡಿಸಬೇಕಾಗಿದೆ ಎಂದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕಿ ಶ್ರೀಮತಿ ಸರಸ್ವತಿ ಬಡಸ ಅವರು ಬಾಲ್ಯ ವಿವಾಹವು ಕೇವಲ ಸಾಮಾಜಿಕ ಅನಿಷ್ಟವಲ್ಲ, ಅದು ಕಾನೂನಾತ್ಮಕ ಅಪರಾಧವೂ ಹೌದು. ಬಾಲ್ಯದಲ್ಲೇ ಮದುವೆಯಾಗುವ ಬಾಲಕಿಯರು ಎಂ ಬಿ ಗಡಾದ ಪ್ರಧಾನ ಗುರುಗಳು ಣದಿಂದ ವಂಚಿತರಾಗಿ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಮದುವೆಗಳು ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗಲು ಪ್ರಮುಖ ಕಾರಣವಾಗುತ್ತಿವೆ. ಬಾಲ ಗರ್ಭಧಾರಣೆ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವನ್ನುಂಟುಮಾಡುವುದರ ಜೊತೆಗೆ, ಕುಟುಂಬ ಮತ್ತು ಸಮಾಜದ ಮೇಲೆ ಭಾರೀ ಪರಿಣಾಮ ಬೀರುತ್ತಿದೆ ಎಂದು ಮಾಹಿತಿ ನೀಡಿದರು. ಭೀಕರ ಅಪರಾಧ ನಮ್ಮ ಸುತ್ತಮುತ್ತಲೇ ಮೌನವಾಗಿ ನಡೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಉದ್ಯೋಗ, ಉತ್ತಮ ಜೀವನದ ಆಸೆ ತೋರಿಸಿ ಅಮಾಯಕ ಮಕ್ಕಳನ್ನು ಮತ್ತು ಮಹಿಳೆಯರನ್ನು ದುಷ್ಕೃತ್ಯಗಳಿಗೆ ದೂಡುವ ಘಟನೆಗಳು ಹೆಚ್ಚುತ್ತ ಚಂದ್ರಕಲಾ ಕೆ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕರು ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಪ್ರೇಮ ಪ್ರಕರಣಗಳು ಕೂಡ ಹೆಚ್ಚುತ್ತಿದ್ದು, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಇದಕ್ಕೆ ಪ್ರಮುಖ ಕಾರಣವಾಗಿದೆ. ವಯಸ್ಸಿನ ಅರಿವು ಇಲ್ಲದೆ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಮಕ್ಕಳ ವಿದ್ಯಾಭ್ಯಾಸ, ಕುಟುಂಬ ಗೌರವ ಹಾಗೂ ಭವಿಷ್ಯವನ್ನು ನಾಶಮಾಡುವ ಸ್ಥಿತಿಗೆ ತಳ್ಳುತ್ತಿವೆ. ಇಂತಹ ಪ್ರಕರಣಗಳು ಪೋಕ್ಸೋ ಕಾಯ್ದೆಯಡಿ ಗಂಭೀರ ಅಪರಾಧಗಳಾಗಿದ್ದು, ಮಕ್ಕಳು ಮತ್ತು ಪೋಷಕರು ಈ ಕುರಿತು ಸ್ಪಷ್ಟ ಅರಿವು ಹೊಂದಿರಬೇಕು.ಈ ಎಲ್ಲಾ ಸಮಸ್ಯೆಗಳನ್ನು ತಡೆಗಟ್ಟುವಲ್ಲಿ ಪೋಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. “ಮನೆಯೇ ಮೊದಲ ಪಾಠಶಾಲೆ ಹಿ ತಾಯಿಯೇ ಮೊದಲ ಗುರು” ಎಂಬಂತೆ, ಮಕ್ಕಳಲ್ಲಿ ನೈತಿಕ ಮೌಲ್ಯಗಳು, ಶಿಸ್ತು ಮತ್ತು ಜವಾಬ್ದಾರಿಯ ಅರಿವು ಬೆಳೆಸುವುದು ಕುಟುಂಬದಿಂದಲೇ ಆರಂಭವಾಗಬೇಕು. ಮಕ್ಕಳೊಂದಿಗೆ ಮುಕ್ತವಾಗಿ ಮಾತನಾಡುವುದು, ಅವರ ಚಟುವಟಿಕೆಗಳ ಮೇಲೆ ಗಮನಹರಿಸುವುದು ಹಾಗೂ ತಪ್ಪು ದಾರಿಯತ್ತ ಸಾಗದಂತೆ ಮಾರ್ಗದರ್ಶನ ನೀಡುವುದು ಪೋಷಕರ ಕರ್ತವ್ಯವಾಗಿದೆ ಎಂದು ತಿಳಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಬಿ ಗಡಾದ ಪ್ರಧಾನ ಗುರುಗಳು ವಹಿಸಿದರು ಬಿಸಿ ಬಾಗೇವಾಡಿ ಶಿಕ್ಷಕರು ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು ಬಿಆರ್ ಗುಗ್ಗರಿ ಕಾರ್ಯಕ್ರಮ ನಡೆಸುವುದರೊಂದಿಗೆ ವಂದನಾರೆ್ಣ ತಿಳಿಸಿದರು, ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರು ವಿದ್ಯಾರ್ಥಿ ಮತ್ತು ಪೋಷಕರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 