ಮಾದಕ ದ್ರವ್ಯಗಳ ಅರಿವು ಅಗತ್ಯ: ಪಿಎಸ್ಐ ಸಚೀನ ಆಲಮೇಲಕರ
Awareness of narcotics is essential: PSI Sachina Alamelakara
ದೇವರಹಿಪ್ಪರಗಿ 22: ‘ಮಾದಕ ದ್ರವ್ಯಗಳ ಬಗೆಗೆ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಮಕ್ಕಳು, ಯುವಕರು ಮಾದಕ ದ್ರವ್ಯಗಳತ್ತ ಆಕರ್ಷಿತ ರಾಗುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ’ ಎಂದು ಪಿಎಸ್ಐ ಸಚೀನ ಆಲಮೇಲಕರ ಕಳವಳ ವ್ಯಕ್ತಪಡಿಸಿದರು. ಪಟ್ಟಣದ ಎ.ಬಿ.ಸಾಲಕ್ಕಿ ಪ.ಪೂ ಕಾಲೇಜಿನ ಸಭಾಭವನದಲ್ಲಿ ಸೋಮವಾರದಂದು ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ’ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು.‘ವಿದ್ಯಾರ್ಥಿಗಳು ಯಾವುದೇ ದುಶ್ಚಟ ಹಾಗೂ ಮಾದಕ ದ್ರವ್ಯ ವ್ಯಸನಿಗಳಾಗದೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ’ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮತ್ತು ಸೇವನೆ ಮಾಡುವುದು ಕಾನೂನು ಬಾಹಿರ.
ತಾಲ್ಲೂಕನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸಲು ಸಾರ್ವಜನಿಕರು ವಿದ್ಯಾರ್ಥಿಗಳು ಇಲಾಖೆಯೊಂದಿಗೆ ಕೈಜೋಡಿಸಬೇಕು‘ ಮುಖ್ಯವಾಗಿದೆ’ಮಂಗಳವಾರದಂದು ಪಟ್ಟಣದ ಟಿಪ್ಪು ವೃತ್ತದಿಂದ ಅಂಬೇಡ್ಕರ್ ವೃತ್ತದ ವರೆಗೆ ಜಾಗೃತಿ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಸ್ಥಳಿಯ ಕಾಲೇಜಿನ ಪ್ರಾಂಶುಪಾಲರಾದ ವ್ಹಿ.ಜಿ. ಹೂನಳ್ಳಿ ಅವರು ಮಾತನಾಡಿ, ‘ಯುವ ಪೀಳಿಗೆಯಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಟರಿಣಾಮಗಳ ಅರಿವು ಹಾಗೂ ವ್ಯಸನದಿಂದ ಮುಕ್ತಗೊಳಿಸುವಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮುಖ್ಯವಾಗಿದೆ’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಕೆ.ವ್ಹಿ.ಒಡೆಯರ,ವಿ.ಆರಿ್ಹರೇಮಠ, ಪೋಲಿಸ್ ಪೇದೆಗಳಾದ ಎಂ.ಎಸ್.ತೊರವಿ, ಸಿದ್ದು ಗಂಗನಹಳ್ಳಿ, ಶ್ರೀಕಾಂತ ಸಿಂಧನೂರ ಸೇರಿದಂತೆ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ,ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 