ಲೋಕದರ್ಶನ ವರದಿ
ಗಂಗಾವತಿ 19: ಜಾಗತಿಕ ಮಟ್ಟದಲ್ಲಿ ಹೆಮ್ಮರವಾಗಿ ಹರಡುತ್ತಿರುವ ಕೊರೋನಾ ವೈರಸ್ ಇತ್ತೀಚಿಗೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಮ್ಮ ದೇಶ ಮುಂಚಿತವಾಗಿ ಎಚ್ಚೆತ್ತುಕೊಳ್ಳದೇ ತಡವಾಗಿ ಭದ್ರತಾ ಕ್ರಮಗಳು ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ ಈ ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರು ತುಂಬಾ ಆತಂಕಕೀಡಾಗಿದ್ದಾರೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರಲ್ಲಿ ಇರುವ ತಪ್ಪುಕಲ್ಪನೆ ಹಾಗೂ ಭಯವನ್ನು ಹೋಗಲಾಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಿ. 16ರಂದು ಸಂಜೆ 05:30ಕ್ಕೆ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಕಾರ್ಯಕ್ರಮದ ಮೂಲಕ ಕರವೇ (ಪ್ರವೀಣಕುಮಾರ ಶೆಟ್ಟಿ ಬಣದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಮನವಿ ಮಾಡಿದರು.
ಅವರು ಈ ಸಂದರ್ಭದಲ್ಲಿ ಮಾತನಾಡುತ್ತಾ, ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಆದರೆ ಭಾರತ ಸಕರ್ಾರ ಕೊರೋನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿಸಿ ಸರಿಯಾದ ಸಮಯದಲ್ಲಿ ಸೂಕ್ತ ಭದ್ರತೆ ಕ್ರಮಗಳನ್ನು ಅನುಸರಿಸದೇ ಇರುವುದರಿಂದ ದೇಶದ ಕೆಲವು ಭಾಗಗಳಲ್ಲಿ ಈ ವೈರಸ್ ಕಂಡುಬಂದಿದೆ. ಈ ರೀತಿ ಸರ್ಕಾರ ತಡವಾಗಿ ಕ್ರಮ ಕೈಗೊಂಡಿರುವುದರಿಂದ ಈಗಾಗಲೇ ನಮ್ಮ ರಾಜ್ಯಕ್ಕೂ ವೈರಸ್ ದಾಪುಗಾಲು ಇಟ್ಟಿದೆ. ಉದಾಹರಣೆಗೆ ಕಲಬುರ್ಗಿಯಲ್ಲಿ ವಯೋವೃದ್ಧರೊಬ್ಬರು ಕೊರೋನಾ ವೈರಸ್ ಸೋಂಕಿನಿಂದ ಮರಣ ಹೊಂದಿರುವುದು ದೃಢಪಟ್ಟಿರುವುದು ಹಾಗೂ ಬೆಂಗಳೂರಿನಲ್ಲಿ ಸೋಂಕಿತ ವ್ಯಕ್ತಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು. ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲಾ ಜನದಟ್ಟಣೆ ಪ್ರದೇಶಗಳಲ್ಲಿ ಅದರಲ್ಲೂ ವಿಶೇಷವಾಗಿ ಬಸ್ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆಗಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಕೊಳಚೆ ಪ್ರದೇಶಗಳಲ್ಲಿ ಈ ವೈರಸ್ ಬಗ್ಗೆ ಜಾಗೃತಿ ಮೂಡಿಸಬೇಕು. ರಾಜ್ಯ ಸರ್ಕಾರ ಹಾಗೂ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಂಬಂಧಪಟ್ಟ ಸಕರ್ಾರಿ ಹಾಗೂ ಖಾಸಗಿ ವೈದ್ಯಾಧಿಕಾರಿಗಳ ಸಭೆ ಕರೆದು ಸೋಂಕಿತ ವ್ಯಕ್ತಿಗಳಿಗೆ 150 ರಿಂದ 200 ಹಾಸಿಗೆಯ ವಿಶೇಷ ಕೊಠಡಿಗಳನ್ನು ಚಿಕಿತ್ಸೆಗಾಗಿ ನಿರ್ಮಿಸಿ, ಸೋಂಕಿತರನ್ನು ನಿಗಾ ಘಟಕದಲ್ಲಿಟ್ಟು, ರೋಗಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕೆಂದು ಕರವೇ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಕರವೇ ಪದಾಧಿಕಾರಿಗಳಾದ ಹುಸೇನಸಾಬ್, ಶಂಕರ ಪೂಜಾರಿ, ಜಿಲಾನ್, ಅನ್ವರ್, ಅಂಜಿ ಪೂಜಾರಿ, ಅಮ್ಜಾದ್ ಇನ್ನೂ ಮುಂತಾದ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.