ಯರಗೇರಾದಲ್ಲಿ ದತ್ತು ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

ಯರಗೇರಾದಲ್ಲಿ ದತ್ತು ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ Awareness program as part of the adoption month celebration in Yaragera


ಕೊಪ್ಪಳ   11:  ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ-1098/112 ಕೊಪ್ಪಳ ಹಾಗೂ ಸ್ವಯಂ ಸೇವಾ ಸಂಸ್ಥೆಗಳು, ಗ್ರಾಮ ಪಂಚಾಯತ್ ಯರಗೇರಾ ಇವರುಗಳ ಸಂಯುಕ್ತ ಆಶ್ರಯದಲ್ಲಿ ದತ್ತು ಮಾಸಾಚರಣೆ-2025ರ ಅಂಗವಾಗಿ ಯರಗೇರಾದಲ್ಲಿ ನವೆಂಬರ್ 7 ರಂದು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  

ಜಿಲ್ಲಾ ಮಕ್ಕಳ ರಕಣಾ ಘಟಕದ ರಕ್ಷಣಾಧಿಕಾರಿ(ಅಸಾಂಸ್ಥಿಕ) ಪ್ರಶಾಂತ ರಡ್ಡಿ ಅವರು ಮಾತನಾಡಿ, ಕಾನೂನು ಬದ್ಧವಾಗಿ ಮಕ್ಕಳನ್ನು ದತ್ತು ಪಡೆಯಲು ಸರಕಾರವು ಹಲವಾರು ಕಾನೂನುಗಳಲ್ಲಿ ಅವಕಾಶಗಳನ್ನು ಕಲ್ಪಿಸಿದೆ. ಮಕ್ಕಳ ನ್ಯಾಯ(ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ತಿದ್ದುಪಡಿ-2021ರ ಕಲಂ 81 ರನ್ವಯ ಮಕ್ಕಳ ಮಾರಾಟ ಮಾಡುವುದು ಅಥವಾ ಕೊಳ್ಳುವುದು ಶಿಕ್ಷಾರ್ಹ ಅಪರಾಧ ಈ ಕೃತ್ಯಕ್ಕೆ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ. 1 ಲಕ್ಷ ದಂಡ ತಪ್ಪಿದ್ದಲ್ಲ. ಈ ರೀತಿಯ ಕೃತ್ಯದಲ್ಲಿ ಶಾಮೀಲಾದ ಆಸ್ಪತ್ರೆ, ನರ್ಸಿಂಗ್ ಹೋಂ, ಹೆರಿಗೆ ಆಸ್ಪತ್ರೆಗಳ ಅಧಿಕಾರಿ, ಸಿಬ್ಬಂದಿಗಳಿಗೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ವಿವರಿಸಿದರು. 

ಕುಷ್ಟಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಯಲ್ಲಮ್ಮ ಹಂಡಿ ಮಾತನಾಡಿ, ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ರನ್ನು ಜಾರಿಗೆ ತಂದಿರುತ್ತದೆ. ರಾಜ್ಯದಲ್ಲಿ ಬಾಲ್ಯವಿವಾಹ ಪ್ರಮಾಣಗಳು ಅಧಿಕವಾಗಿರುವುದನ್ನು ಗಮನಿಸಿ ಕರ್ನಾಟಕ ಸರ್ಕಾರವು ಮತ್ತಷ್ಟು ಪರಿಣಾಮಕಾರಿಯಾಗಿ ಈ ಕಾಯ್ದೆಯನ್ನು ಅನುಷ್ಠಾನಗೊಳಿಸಲು-2016ರಲ್ಲಿ ತಿದ್ದುಪಡಿಯನ್ನು ತಂದಿರುತ್ತದೆ. ಅದರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆಯನ್ನು ಮಾಡಿದವರಿಗೆ, ಭಾಗವಹಿಸಿದವರಿಗೆ ಮತ್ತು ಪ್ರೋತ್ಸಾಹಿಸಿದವರಿಗೆ ಕನಿಷ್ಠ ಒಂದು ವರ್ಷದಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಹಿರಿಯ ಪಂಚಾಯತ ಅಭಿವೃದ್ದಿ ಅಧಿಕಾರಿ ದೇವೇಂದ್ರ​‍್ಪ ಕಮತರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಪ್ರತಿಭಾ ಕಾಶಿಮಠ,  ಯರಗೇರಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಂಗಯ್ಯ ವಸ್ತ್ರದ, ಎ.ಎಸ್‌.ಐ ಶಂಕರ ಮೇಟಿ,  ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶಂಕ್ರ​‍್ಪ,  ಸಹಶಿಕ್ಷಕರಾದ ಶಾಂತಾ ಮಾವಿನ ಇಟಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸದಾಶಿವಯ್ಯ ಹಿರೇಮಠ, ಗುಡದೂರಕಲ್ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ರವಿಕುಮಾರ ನಾಯಕ, ಮುದ್ದಾಳ ಸಹಶಿಕ್ಷಕರಾದ ಲೀಲಾ ಹೂಗಾರ, ಸಮುದಾಯ ಆರೋಗ್ಯಾಧಿಕಾರಿ ಭೀರ​‍್ಪ ವಡಗೇರಿ,  ಯರಗೇರಾ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.