ಗದಗದ ಕೆ.ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಲ್ಲಿ ಜಾಗೃತಿ ಕಾರ್ಯಕ್ರಮ
Awareness program at K.H. Patil Medical Sciences College, Gadag
ಲೋಕದರ್ಶನ ವರದಿ
ಗದಗ, ಜು. 23: ಕೆ.ಹೆಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕ್ಲಿನಿಕ್ ವತಿಯಿಂದ ಜುಲೈ 22ರಂದು ವಿಶ್ವ ಮೆದುಳು ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ಜಿ.ಎಸ್. ಪಲ್ಲೇದ, ವೈದ್ಯಕೀಯ ಅಧೀಕ್ಷಕ ಡಾ. ವಿನಾಯಕ ಪಂಚಗಾರ, ಎಲುಬು ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ. ಮಹಾಂತೇಶ ಪಾಟೀಲ, ವೈದ್ಯಕೀಯ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಂಗಮೇಶ್ ಅಸೂಟಿ ಹಾಗೂ ಕ್ಷಯರೋಗ ವಿಭಾಗದ ಮುಖ್ಯಸ್ಥ ಡಾ. ಅರುಣಕುಮಾರ ಉದ್ಘಾಟಿಸಿದರು.
ಡಾ. ಜಿ.ಎಸ್. ಪಲ್ಲೇದ ಮಾತನಾಡಿ, ಪ್ರತಿವರ್ಷ ಜುಲೈ 22ರಂದು ವಿಶ್ವ ಮೆದುಳು ದಿನಾಚರಣೆಯನ್ನು ಆಚರಿಸುವ ಮೂಲಕ ಮೆದುಳಿನ ಆರೋಗ್ಯ ಮತ್ತು ನರರೋಗಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿದಿನ 7ಹಿ8 ಗಂಟೆಗಳ ನಿದ್ರೆ, ನಿಯಮಿತ ವ್ಯಾಯಾಮ, ವಾಹನ ಚಲಾಯಿಸುವಾಗ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸುವುದು, ಒತ್ತಡ ನಿಯಂತ್ರಣಕ್ಕೆ ಯೋಗ ಮತ್ತು ಧ್ಯಾನ ಮಾಡುವುದು ಹಾಗೂ ಅಗತ್ಯವಿದ್ದಾಗ ವೈದ್ಯರ ಸಲಹೆ ಪಡೆಯುವುದು ಅತ್ಯಗತ್ಯ ಎಂದು ತಿಳಿಸಿದರು.
ಎನ್ಸಿಡಿ ವೈದ್ಯಾಧಿಕಾರಿ ಡಾ. ಅರ್ಿತಾ ಮಾತನಾಡಿ, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದರಿಂದ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬಹುದು. ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಮೆದುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಸಿಬ್ಬಂದಿ, ಜಿಲ್ಲಾ ಕುಷ್ಠರೋಗ ವಿಭಾಗದ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನಾ ಸಿ. ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಸಂಯೋಜಕ ಪ್ರವೀಣ ಎಸ್. ರೋಣ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 