ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
Awareness program marking the International Day Against Drug Abuse
ಲೋಕದರ್ಶನ ವರದಿ
ಕಾಗವಾಡ 1: ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ತಾಲೂಕಿನ ಮೊಳೆ, ಮದಭಾವಿ, ಕಾಗವಾಡ ಹಾಗೂ ಶಿರಗುಪಿ ಶಾಲಾ-ಕಾಲೇಜು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆನ್ಲೈನ್ ಮೂಲಕ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.
ಜೂನ್ 26ರಂದು ರಾಜ್ಯಾದ್ಯಂತ ಏಕಕಾಲದಲ್ಲಿ 1,000ಕ್ಕೂ ಹೆಚ್ಚು ಶಾಲಾ-ಕಾಲೇಜು ನಡೆದ ಈ ಕಾರ್ಯಕ್ರಮದಲ್ಲಿ ತಾಲೂಕಿನ ಮೊಳೆ ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢಶಾಲೆ, ಮದಭಾವಿಯ ಶ್ರೀ ಸಿದ್ದೇಶ್ವರ ವಿದ್ಯಾವರ್ಧಕ ಸಂಸ್ಥೆ, ಕಾಗವಾಡ ಪಟ್ಟಣದ ಶ್ರೀ ವಿದ್ಯಾಸಾಗರ ಪ್ರೌಢಶಾಲೆ ಹಾಗೂ ಶಿರಗುಪ್ಪಿಯ ಅರಿಹಂತ ಪ್ರೌಢ ಶಿಕ್ಷಣ ಸಮಿತಿಯ ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು, ಆರೋಗ್ಯದ ಮೇಲೆ ಬೀರುವ ಪರಿಣಾಮ, ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ಹಾನಿಗಳ ಕುರಿತು ಮಾಹಿತಿ ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು, ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗೂ ವೈದ್ಯರು ಮಾದಕ ವ್ಯಸನ ತಡೆ ಕುರಿತು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಸ್ಥಳೀಯ ಗಣ್ಯರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು, ಯೋಜನೆಯ ಅಧಿಕಾರಿಗಳು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 