ವಿಶ್ವ ನ್ಯುಮೋನಿಯಾ ದಿನ ಕುರಿತು ಜಾಗೃತಿ ಕಾರ್ಯಕ್ರಮ
ಬೆಳಗಾವಿ 12: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಬುಧವಾರ 12ನೆ ನವೆಂಬರ್ 2025 ರಂದು ವಿಶ್ವ ನ್ಯುಮೋನಿಯಾ ದಿನ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯೆ ಡಾ. ಜ್ಯೋತಿ ಹಟ್ಟಿಹೋಳಿ ಅವರು ಭಾಗವಹಿಸಿ ವಿಶ್ವ ನ್ಯುಮೋನಿಯಾ ದಿನದ ಇತಿಹಾಸ, ಈ ವರ್ಷದ ಘೋಷವಾಕ್ಯ ಮತ್ತು ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು.
ನ್ಯುಮೋನಿಯಾ ಶ್ವಾಸಕೋಶಗಳಿಗೆ ತಗಲುವ ಒಂದು ಸೊಂಕು, ಬಾಯಿ ಅಥವಾ ಮೂಗಿನ ಮೂಲಕ ನಡೆಸುವ ಉಚ್ಛಾಸದ ಮೂಲಕ ಶ್ವಾಸಕೋಶಗಳ ಒಳಕ್ಕೆ ಸೇರುವ ಸೂಕ್ಷ್ಮ ಜೀವಿಗಳಿಂದಾಗಿ ಈ ಸೊಂಕು ಉಂಟಾಗುವುದಕ್ಕೆ ನ್ಯುಮೋನಿಯಾ ಎಂದು ಕರೆಯುತ್ತಾರೆ. ನ್ಯುಮೋನಿಯಾ ಒಬ್ಬರಿಂದ ಒಬ್ಬರಿಗೆ ಹರಡುವ ಈ ರೋಗ ಸೊಂಕು ಪೀಡಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಹರಡುವ ಸಾಧ್ಯತೆ ಇರುತ್ತದೆ, ಈ ಸೊಂಕಿನಿಂದ ವ್ಯಕ್ತಿಯಲ್ಲಿ ಶ್ವಾಸಕೋಶ ಕ್ರಮೇಣವಾಗಿ ಹಾನಿಯಾಗತೊಡಗುತ್ತದೆ ಎಂದು ತಿಳಿಸಿದರು. ನ್ಯುಮೋನಿಯಾಕ್ಕೆ ಮುಂಜಾಗೃತ ಕ್ರಮಗಳು ಮತ್ತು ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ತಿಳಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು.
ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 