ಶಾಲಾ ವಾಹನಗಳ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ

ಶಾಲಾ ವಾಹನಗಳ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ  Awareness program on school vehicle safety

ತಾಳಿಕೋಟಿ  09: ವಿದ್ಯಾರ್ಥಿಗಳನ್ನು ಕರೆದೊಯ್ಯುವ ಶಾಲಾ ವಾಹನಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ( ಪಿ.ಎಸ್‌.ಐ.) ಜ್ಯೋತಿ ಖೋತ ಮತ್ತು ಆರಕ್ಷಕ ಸಿಬ್ಬಂದಿ ವರ್ಗದವರು ಬ್ರಿಲಿಯಂಟ್ ಶಾಲೆಯಲ್ಲಿ ವಾಹನಗಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಗುರುವಾರ ತಾಲೂಕಿನ ಮೈಲೇಶ್ವರದಲ್ಲಿರುವ ಬ್ರಿಲಿಯಂಟ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಆಗಮಿಸಿದ ಅವರು ವಾಹನಗಳ ಫಿಟ್ನೆಸ್ ಪ್ರಮಾಣ ಪತ್ರ, ವಿಮೆ, ವೇಗ ನಿಯಂತ್ರಕಗಳನ್ನು ಪರೀಶೀಲಿಸಿ, ಎಲ್ಲ ವಾಹನಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ನಂತರ ಶಾಲಾ ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಗಾಗಿ ಪಾಲಿಸಬೇಕಾದ ನಿಯಮಗಳನ್ನು ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎನ್‌.ಬಿ.ನಡುವಿನಮನಿ, ಉಪಾಧ್ಯಕ್ಷ ಆರಿ​‍್ಬ.ನಡುವಿನಮನಿ, ಕಾರ್ಯದರ್ಶಿ ಎಮ್ ಬಿ ಮಡಿವಾಳರ, ಪೊಲೀಸ್ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.