ಶಾಲಾ ವಾಹನಗಳ ಸುರಕ್ಷತೆಗಾಗಿ ಜಾಗೃತಿ ಕಾರ್ಯಕ್ರಮ
Awareness program on school vehicle safety
ತಾಳಿಕೋಟಿ 09: ವಿದ್ಯಾರ್ಥಿಗಳನ್ನು ಕರೆದೊಯ್ಯುವ ಶಾಲಾ ವಾಹನಗಳ ಸುರಕ್ಷತೆಯ ಹಿತ ದೃಷ್ಟಿಯಿಂದ ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ( ಪಿ.ಎಸ್.ಐ.) ಜ್ಯೋತಿ ಖೋತ ಮತ್ತು ಆರಕ್ಷಕ ಸಿಬ್ಬಂದಿ ವರ್ಗದವರು ಬ್ರಿಲಿಯಂಟ್ ಶಾಲೆಯಲ್ಲಿ ವಾಹನಗಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದರು. ಗುರುವಾರ ತಾಲೂಕಿನ ಮೈಲೇಶ್ವರದಲ್ಲಿರುವ ಬ್ರಿಲಿಯಂಟ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಆಗಮಿಸಿದ ಅವರು ವಾಹನಗಳ ಫಿಟ್ನೆಸ್ ಪ್ರಮಾಣ ಪತ್ರ, ವಿಮೆ, ವೇಗ ನಿಯಂತ್ರಕಗಳನ್ನು ಪರೀಶೀಲಿಸಿ, ಎಲ್ಲ ವಾಹನಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಂಡು ನಂತರ ಶಾಲಾ ವಾಹನ ಚಾಲಕರಿಗೆ ಸುರಕ್ಷಿತ ಚಾಲನೆಗಾಗಿ ಪಾಲಿಸಬೇಕಾದ ನಿಯಮಗಳನ್ನು ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎನ್.ಬಿ.ನಡುವಿನಮನಿ, ಉಪಾಧ್ಯಕ್ಷ ಆರಿ್ಬ.ನಡುವಿನಮನಿ, ಕಾರ್ಯದರ್ಶಿ ಎಮ್ ಬಿ ಮಡಿವಾಳರ, ಪೊಲೀಸ್ ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 