ಸ್ವಾತಂತ್ರ್ಯೋತ್ಸವ ಅಂಗವಾಗಿ ದೇಶಭಕ್ತಿ, ರಾಷ್ಟ್ರಾಭಿಮಾನ ಸಾರುವ ಜಾಗೃತಿ ಕಾರ್ಯಕ್ರಮ
Awareness program promoting patriotism and national pride on the occasion of Independence Day
ಶಿಗ್ಗಾಂವಿ, ಆ.14: ರಾಷ್ಟ್ರಧ್ವಜ ಕೇವಲ ಮೂರು ಬಣ್ಣಗಳ ಸಂಕೇತವಲ್ಲ. ಅದು ದೇಶದ ಸ್ವಾತಂತ್ರ್ಯ, ತ್ಯಾಗ, ಶೌರ್ಯ ಹಾಗೂ ಏಕತೆಯ ಪ್ರತೀಕವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದು ಪ್ರಾಂಶುಪಾಲೆ ಸೌಮ್ಯ ಹೇಳಿದರು.
ಪಟ್ಟಣದ ಹೊರವಲಯದಲ್ಲಿರುವ ಫಿನಿಕ್ಸ್ ಇಂಟರ್ನ್ಯಾಷನಲ್ ಸಮೂಹ ಸಂಸ್ಥೆಯ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಹಾಗೂ ರಾಷ್ಟ್ರಾಭಿಮಾನ ಮೂಡಿಸುವ ಉದ್ದೇಶದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪಟ್ಟಣದ ಅಂಚೆ ಕಚೇರಿಯಿಂದ ಆರಂಭವಾದ ಜಾಗೃತಿ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವಕರು ದೇಶದ ಭವಿಷ್ಯದ ಶಕ್ತಿಯಾಗಿದ್ದು, ಶಿಕ್ಷಣದ ಜೊತೆಗೆ ದೇಶಪ್ರೇಮ, ಶಿಸ್ತು, ಸಂಸ್ಕಾರ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಶಿಕ್ಷಕ ಗದಿಗೇಶ್ ಮಾತನಾಡಿ, ಸ್ವಾತಂತ್ರ್ಯ ಎಂದರೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲ. ಪ್ರತಿಯೊಬ್ಬ ನಾಗರಿಕನು ಹಿಂಸೆ, ಶೋಷಣೆ, ಭಯ ಹಾಗೂ ಅವಲಂಬನೆಯಿಂದ ಮುಕ್ತನಾಗಿ ಸ್ವಾಭಿಮಾನ ಮತ್ತು ಸ್ವಾವಲಂಬನೆಯೊಂದಿಗೆ ಬದುಕುವಂತಾಗಬೇಕು. ಎಲ್ಲರ ಸಬಲೀಕರಣದಿಂದಲೇ ಸದೃಢ ಹಾಗೂ ಸಶಕ್ತ ಭಾರತ ನಿರ್ಮಾಣ ಸಾಧ್ಯ ಎಂದರು.
ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜಗಳನ್ನು ಹಿಡಿದು ‘ವಂದೇ ಮಾತರಂ’, ‘ಭಾರತ್ ಮಾತಾ ಕೀ ಜೈ’, ‘ಕರ್ನಾಟಕ ಮಾತಾ ಕೀ ಜೈ’ ಎಂಬ ಘೋಷಣೆಗಳನ್ನು ಕೂಗುವ ಮೂಲಕ ದೇಶಪ್ರೇಮ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಫಿನಿಕ್ಸ್ ಇಂಟರ್ನ್ಯಾಷನಲ್ ಸಮೂಹ ಸಂಸ್ಥೆಯ ಶಿಕ್ಷಕರಾದ ಅಸ್ಮಾ, ಮಂಜುಳಾ, ಕಿರಣ್, ಅಪ್ಪಣ್ಣ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 