ಹಿರಿಯರ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಕಾರ್ಯಕ್ರಮ
Awareness program to prevent elder abuse
ವಿಜಯಪುರ : ನಗರದ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದಿಂದ ಹಿರಿಯರ ಮೇಲಿನ ದೌರ್ಜನ್ಯ ತಡೆ ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಜಗದೀಶ ಕೆ. ಉದ್ಘಾಟಿಸಿ, ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ಕಾನೂನು ಶಾಲೆಯ ಪ್ರಾಚಾರ್ಯ ಡಾ. ರಘುವೀರ ಕುಲಕರ್ಣಿ ಹಿರಿಯರ ಹಕ್ಕುಗಳು ಹಾಗೂ ಕಾನೂನು ರಕ್ಷಣೆಯ ಬಗ್ಗೆ ಮಾತನಾಡಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸಂಜೀವ ಬೆಂಟೂರ ಹಿರಿಯರಿಗೆ ಅಗತ್ಯ ವೈದ್ಯಕೀಯ ಹಾಗೂ ಸಮಾಲೋಚನಾ ಸೇವೆಗಳನ್ನು ಒದಗಿಸುವ ಭರವಸೆ ನೀಡಿದರು.
ಹಿರಿಯ ನಾಗರಿಕರ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ. ಆನಂದ ಪಿ. ಅಂಬಲಿ, ದೌರ್ಜನ್ಯದಿಂದ ಉಂಟಾಗುವ ಮಾನಸಿಕ ಸಮಸ್ಯೆಗಳು ಹಾಗೂ ವಿಭಾಗದಲ್ಲಿ ನೀಡಲಾಗುತ್ತಿರುವ ಚಿಕಿತ್ಸೆ ಮತ್ತು ಮಾರ್ಗದರ್ಶನ ಕುರಿತು ವಿವರಿಸಿದರು. ಇದೇ ಸಂದರ್ಭದಲ್ಲಿ ಪೋಸ್ಟರ್ ಸ್ಪರ್ಧೆಯ ವಿಜೇತರಾದ ಎಂ.ಕೆ. ಹಿರ್ಯಾಳ, ಅನುಪಮಾ ಸಿನ್ಹಾ, ಅಂಜಲಿ ವರ್ಮಾ ಹಾಗೂ ದಾನಮ್ಮ ಅರಳಿ ಅವರನ್ನು ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 