ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ Awareness-raising program as part of the special intensive revision of electoral rolls

ಲೋಕದರ್ಶನ ವರದಿ 

ಗದಗ 28: ಗದಗ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಗದಗ ಇವರ ಸಹಯೋಗದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ( ಎಸ್‌ಐಆರ್ ) ರ ಅಂಗವಾಗಿ ಎಸ್‌ಐಆರ್ -2026 ಬಗ್ಗೆ ಜಾಗೃತಿ/ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಂಗಳವಾರ ಗದಗ ನರಸಾಪುರ ಕೈಗಾರಿಕೆ ವಸಾಹತು ಆವರಣದಲ್ಲಿ ಹಮ್ಮಿಕೊಳ್ಳಲಾಯತು. 

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ಅಭಿರಕ್ಷಕರಾದ ಗುರುರಾಜ ಬಿ. ಗೌರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದ ಸದೃಢತೆಗೆ ನಿಖರ ಮತದಾರರ ಪಟ್ಟಿ ಅತ್ಯಂತ ಅವಶ್ಯವಾಗಿದ್ದು ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರೆ​‍್ಡಗೊಂಡಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಹಿಂದೆ ಇದ್ದ ಮತದಾರರು ಸದ್ಯ ಅದೇ ಸ್ಥಳದಲ್ಲಿದ್ದಾರೆಯೇ ಹೊಸದಾಗಿ ಯಾರೆಲ್ಲ ಸೇರೆ​‍್ಡಯಾಗಬೇಕು ಎಂಬುದನ್ನು ಗುರುತಿಸಿ ದೃಢೀಕರಿಸುವ ಸಲುವಾಗಿ ಈ ವರ್ಷ ಎಸ್‌ಐಆರ್ ಹಿ 2026 ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಬಿ.ಎಲ್‌.ಓಗಳು ಮನೆ ಮನೆಗೆ ಭೇಟಿ ನೀಡಿದಾಗ ಸೂಕ್ತ ಫಾರಂ ಭರ್ತಿ ಮಾಡಿ ನೀಡಿ ಪ್ರಕ್ರಿಯೆ ಯಶಸ್ವಿಗೊಳಿಸಬೇಕು ಎಂದು ಗುರುರಾಜ ಬಿ ಗೌರಿ ಅವರು ಸಾರ್ವಜನಿಕರಿಗೆ ಕಾನೂನು ನೆರೆವು ಹಾಗೂ ಪ್ರಸ್ತುತ ಕಾನೂನಿನ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.

ಹಾಗೂ ಎಸ್‌ಐಆರ್ ಬಗ್ಗೆ ಮಾತನಾಡಿದರು.ಜಿ.ಪಂ. ಉಪಕಾರ್ಯದರ್ಶಿ ಸಿ. ಆರ್‌. ಮುಂಡರಗಿ ಇವರು ಮಾತನಾಡಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ ಎಸ್‌ಐಆರ್ -2026ರ ಪ್ರಕ್ರಿಯೆ ಬಗ್ಗೆ ಊಹಾಪೋಹಗಳಿಗೆ ಕಿವಿ ಕೊಡದೇ ಎಸ್‌ಐಆರ್ ಬಗ್ಗೆ ಚುನಾವಣಾ ಆಯೋಗದಿಂದ ಹೊರಡಿಸಲಾದ ವೇಳಾಪಟ್ಟಿಯಂತೆ ಎಲ್ಲರೂ ಸಂಬಂಧಿಸಿದ ಬಿಎಲ್‌ಓ ಗಳಿಗೆ ಸಮರ​‍್ಕವಾದ ಮಾಹಿತಿಯನ್ನು ನೀಡಬೇಕು.

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅತ್ಯಂತ ಪಾರದರ್ಶಕವಾದ ಮತ್ತು ನಿಖರವಾದ ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಈ ವಿಶೇಷ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಪ್ರಾಶುಂಪಾಲರಾದ ಡಾ. ಶಿವಪ್ಪ ಮರಿಬಸಪ್ಪ ಕುರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ( ಎಸ್ ಐ ಆರ್ )2026ರ ಬಗ್ಗೆ ಅರಿವು ಮೂಡಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ. ಪಿ. ಎಚ್‌. ಕ್ಯಾರಕೊಪ್ಪ, ಸಹಾಯಕ ಪ್ರಾಧ್ಯಾಪಕರು, ಸ್ವಾಗತಿಸಿದರು. ಐ.ಕ್ಯೂ.ಎ.ಸಿ. ಸಂಚಾಲಕರಾದ ಖಲೀಲ ಅಹ್ಮದ್ ಚಿಕ್ಕೇರೂರ, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಮಲಪ್ಪ ಹೊಸೂರು, ಕಾರ್ಯಕ್ರಮ ನಿರೂಪಣೆ ಮಾಡಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಮಹಾದೇವ ವಡೇಕಾರ ವಂದಿಸಿದರು.