ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷ 2025 ರ ಕುರಿತು ಜಾಗೃತಿ ಜಾಥಾ
Awareness rally on Social and Educational Survey 2025
ಯಮಕನಮರಡಿ 21: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜು ಯಮಕನಮರಡಿ ಯ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷ 2025 ರ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾ ಕಾರ್ಯಕ್ರಮವು ಕಾಲೇಜಿನಿಂದ ಹೊರಟು ಯಮಕನಮರಡಿಯ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಡ ಕಛೇರಿ ಮುಂದೆ ಮಾನವ ಸರಪಳಿ ನಿರ್ಮಿಸಲಾಯಿತು. ಜಾಥಾ ಕಾರ್ಯಕ್ರಮದಲ್ಲಿ ಉಪನ್ಯಾಸಕ ಬಿ.ಬಿ.ಕೊಡ್ಲಿ ನಾಡ ಕಛೇರಿಯ ಮುಂದೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ ಸಮೀಕ್ಷೆ ದಿನಾಂಕ ಬೇಕಾಗುವ ದಾಖಲೆ ಹಾಗೂ ಮಹತ್ವ ತಿಳಿಸಿ ವಿದ್ಯಾರ್ಥಿಗಳಿಂದ ಘೋಷಣೆಗಳನ್ನು ಕೂಗಿಸಿದರು. ನಂತರದಲ್ಲಿ ಮಾರ್ಕೆಟ ರಸ್ತೆ ಗ್ರಾಮ ಪಂಚಾಯತಿ ಹೀಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜಿಗೆ ವಾಪಸ ತೆರಳಿತು. ಜಾಥಾ ಕಾರ್ಯಕ್ರಮದ ಮುಂದಾಳತ್ವವನ್ನು ಹಿರಿಯ ಉಪನ್ಯಾಸಕ ಎ.ಎ.ಕಿವಂಡಾ ವಹಿಸಿದ್ದರು. ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 