ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಜಾಥಾ
Awareness rally on electoral roll revision
ಲಕ್ಷ್ಮೇಶ್ವರ 5: ಪ್ರಜಾಪ್ರಭುತ್ವದ ಸದೃಢತೆಗೆ ನಿಖರವಾದ ಮತದಾರರ ಪಟ್ಟಿ ಅತ್ಯಂತ ಅಗತ್ಯ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಹೇಳಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಹಿ2026 (ಖಋ-2026) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಲಕ್ಷ್ಮೇಶ್ವರದಲ್ಲಿ ಜಾಗೃತಿ ಜಾಥಾ ಆಯೋಜಿಸಲಾಗಿತ್ತು.
ನಗರದ ಶ್ರೀ ತಾಯಿ ಪಾರ್ವತಿ ಮಕ್ಕಳ ಬಳಗದ ವೃತ್ತದಿಂದ ಆರಂಭವಾದ ಜಾಥಾವು ಹನುಮಂತ ದೇವರ ದೇವಸ್ಥಾನ, ಮುಖ್ಯ ಮಾರುಕಟ್ಟೆ ರಸ್ತೆ, ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕು ಪಂಚಾಯತ್ ರಸ್ತೆ ಮಾರ್ಗವಾಗಿ ಸಂಚರಿಸಿತು. ಈ ವೇಳೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಜಾಗೃತಿ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಜಾಥಾದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು, ವಿಬಿಎಫ್ (ಗಿಃಈ) ಸಿಬ್ಬಂದಿ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸ್ವೀಪ್ ಸಮಿತಿಯ ಸದಸ್ಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕ ಧರ್ಮರ ಕೃಷ್ಣಪ್ಪ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ವಿಯಾಗಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಪ್ರತಿಯೊಬ್ಬ ಅರ್ಹ ನಾಗರಿಕರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ್ಡಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಸ್ವೀಪ್ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 