ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026 ಕುರಿತು ಜಾಗೃತಿ: ಮಕ್ಕಳಲ್ಲೂ ಅರಿವು ಮೂಡಿಸಲು ಕರೆ
Awareness regarding Special Revision of Electoral Rolls-2026: Call to create awareness among childre
ಕಾರವಾರ 5: ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ನಿಖರವಾಗಿಡುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026 (ಖಋ) ಕುರಿತು ಸಾರ್ವಜನಿಕರಲ್ಲಿ, ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ದೀಲೀಶ್ ಶಶಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಎಂದರೇನು, ಅದರ ಉದ್ದೇಶವೇನು, ನಾಗರಿಕರಿಗೆ ಆಗುವ ಪ್ರಯೋಜನಗಳು ಹಾಗೂ ಪರಿಷ್ಕರಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬುದರ ಕುರಿತು ವಿದ್ಯಾರ್ಥಿಗಳು ಸ್ಪಷ್ಟ ಅರಿವು ಹೊಂದಬೇಕು ಎಂದರು.
ವಿದ್ಯಾರ್ಥಿಗಳು ಈ ಮಾಹಿತಿಯನ್ನು ತಮ್ಮ ಪೋಷಕರು ಹಾಗೂ ನೆರೆಹೊರೆಯವರಿಗೆ ತಲುಪಿಸಿ, ಎಸ್‌ಐಆರ್ ಕುರಿತು ಯಾವುದೇ ಗೊಂದಲಗಳಿದ್ದರೆ ನಿವಾರಿಸಲು ಸಹಕರಿಸಬೇಕು. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಯಶಸ್ವಿಯಾಗಲು ಪ್ರತಿಯೊಬ್ಬರೂ ಸಹಭಾಗಿಯಾಗಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಸ್‌ಐಆರ್ ಕುರಿತು ವ್ಯಾಪಕ ಜನಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಂಗವಾಗಿ ನಡೆದ ಸ್ಪರ್ಧೆಯಲ್ಲಿ 33 ವಿದ್ಯಾರ್ಥಿಗಳು ಭಾಗವಹಿಸಿದರು. ವಿಜೇತರಿಗೆ ಇದೇ ತಿಂಗಳ 28ರಂದು ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು ಎಂದು ಆಯೋಜಕರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯ್ಕ, ಚೆಸ್ ಫಿಡೆ ಆರ್ಬಿಟರ್ ಆನಂದ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 