ಬೆಳಗಾವಿ : ತಾಲೂಕಿನ ಅಗಸಗಿ ಗ್ರಾಮದ ಶ್ರೀ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಶಾಲಾ ವಾಷರ್ಿಕೋತ್ಸವ ಇತ್ತೀಚೆಗೆ ಜರುಗಿತು.
ಈ ಸಂದರ್ಭದಲ್ಲಿ 2018-19 ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾಥರ್ಿಗಳಿಗೆ, 2019-20 ವಾಷರ್ಿಕ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗೆದ್ದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬೆಳಗಾವಿ ನಾಗನೂರ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಈ ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪನಿದರ್ೆಶಕ ಎಸ್.ವಿ. ಹಳಿಂಗಳಿ ಮಾತನಾಡಿ, ವಿಧ್ಯಾಥರ್ಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದರು.
ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಕೋರಧಾನ್ಯಮಠ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಕಲಗೌಡ ಪಾಟೀಲ, ಅಮೃತ ಮುದ್ದಣ್ಣವರ, ಈಶ್ವರ ಸನದಿ, ಲಕ್ಷ್ಮಣ ಕಂಗ್ರಾಳಕರ ಹಾಗೂ ಆರ್.ಎ. ಪರ್ವತೆ ಪದವಿ ಕಾಲೇಜಿನ ಪ್ರಾಚಾರ್ಯ ಪಿ.ಎಪ್. ಮೇಟಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯ ರವಿಂದ್ರ ಮಧಾಳೆ ಅಥಿಗಳನ್ನು ಸ್ವಾಗತಿಸಿದರು. ಶಿಕ್ಷಕ ಪಿ.ಆಯ್. ಪಾಯಣ್ಣವರ ನಿರೂಪಿಸಿದರು ವಾಯ್.ಕೆ. ಪಾಟೀಲ ವಂದಿಸಿದರು.