ಅಯೋಧ್ಯಾ ತೀಪು; ಶಾಂತಿ ಕಾಪಾಡುವಂತೆ ಯಡಿಯೂರಪ್ಪ ಮನವಿ

ಬೆಂಗಳೂರು, ನ 9 :     ಅಯೋಧ್ಯಾ ತೀರ್ಪುನ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.    ತಮ್ಮ ಟ್ವಿಟರ್ ಸಂದೇಶದಲ್ಲಿ ಅವರು, 'ಸುಪ್ರೀಂಕೋರ್ಟ್ ಇಂದು ಅಯೋಧ್ಯಾ ಪ್ರಕರಣದ ತೀಪು ನೀಡಲಿದೆ. ಅದನ್ನು ಸಮಾನತೆಯಿಂದ ಸ್ವೀಕರಿಸೋಣ. ದೇಶದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಗೌರವಿಸೋಣ' ಎಂದು ಕರೆ ನೀಡಿದ್ದಾರೆ.     ಈ ನಡುವೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಕಟ್ಟೆಚ್ಚರವ ವಹಿಸಲಾಗಿದೆ. ಆಯಾ ಜಿಲ್ಲೆಗಳ ಸೂಕ್ಷ್ಮ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.