ನವದೆಹಲಿ, ಅ 17: ಅಯೋಧ್ಯೆ ವಿವಾದ ಕುರಿತ ಅಂತಿಮ ತೀಪು ಪ್ರಕಟಿಸಿದ ನಂತರ ಎದುರಾಗುವ ಸಂಕಷ್ಟ, ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಲು ಸುಪ್ರೀಂಕೋರ್ಟ್ನ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ತಿಂಗಳು ಕೈಗೊಳ್ಳಬೇಕಾಗಿದ್ದ ತಮ್ಮ ವಿದೇಶ ಪ್ರವಾಸ ರದ್ದುಪಡಿಸಿದ್ದಾರೆ. ಅವರು, ಈ ತಿಂಗಳ 18 ರಂದು ದುಬೈಗೆ ತೆರಳಿ ಅಲ್ಲಿಂದ ಕೈರೋ, ಬ್ರೆಜಿಲ್ ಮತ್ತು ನ್ಯೂಯಾರ್ಕ್ನ್ಲ್ಲಿ ನಡೆಯುವ ವಿವಿಧ ಸಮಾರಂಭಗಳಲ್ಲಿ ಭಾಗವಹಿಸಿ, ಇದೇ 31ರಂದು ಸ್ವದೇಶಕ್ಕೆ ಹಿಂದಿರುಗುವ ಕಾರ್ಯಕ್ರಮ ನಿಗದಿಯಾಗಿತ್ತು. ಅಯೋಧ್ಯೆ ಪ್ರಕರಣ ಇತ್ಯರ್ಥಪಡಿಸುವ ಪ್ರಕ್ರಿಯೆಯ ಭಾಗವಾಗಿ ಅವರು ತಮ್ಮ ವಿದೇಶ ಭೇಟಿಯನ್ನು ರದ್ದುಪಡಿಸಿದ್ದಾರೆ ಎಂದು ವರದಿಯಾಗಿದೆ. ಅಯೋಧ್ಯ- ರಾಮಜನ್ಮಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸುಪ್ರೀಂಕೋರ್ಟ್ನ್ ಸಂವಿಧಾನ ಪೀಠದ ನೇತೃತ್ವವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಹಿಸಿದ್ದಾರೆ. 40 ದಿನಗಳ ಕಾಲ ನಿತ್ಯ ನಡೆದ ವಿಚಾರಣೆಯ ನಂತರ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿದೆ. ನವಂಬರ್ 17 ರಂದು ಗೊಗೊಯ್ ಅವರು ಸೇವಾ ನಿವೃತ್ತಿಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 4 ರಿಂದ15ರ ನಡುವೆ ತೀಪು ಪ್ರಕಟಿಸುವ ನಿರೀಕ್ಷೆಯಿದೆ.