ವಿದ್ಯಾರ್ಥೀಗಳಿಗೆ ಆಯುರ್ಥಿಂಕ್ ಫೆಸ್ಟ- ತರ್ಕ ಸಂಗ್ರಹಣೆ ಕಾರ್ಯಕ್ರಮ
Ayurthink Festa - Logical Gathering Program for Students
ವಿಜಯಪುರ 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಇ.ಡಿ ಸೆಲ್(ಇಆ ಅಜಟಟ)ವತಿಯಿಂದ, ಆಯುರ್ವೇದ ವೈದ್ಯಕೀಯ ಪದ್ಧತಿಯ ತತ್ವಗಳನ್ನು ನವೀಕರಿಸುವ ಹೊಸ ತರ್ಕ ಮಂಡನೆಯ ಕುರಿತು ವಿದ್ಯಾರ್ಥೀಗಳಿಗೆ ಆಯುರ್ಥಿಂಕ್ ಫೆಸ್ಟ-2026 ವಿಷಯ ಕುರಿತು ತರ್ಕ ಸಂಗ್ರಹಣೆ ಕಾರ್ಯಕ್ರಮ ಶನಿವಾರ ನಡೆಯಿತು.
ಈ ಕಾರ್ಯಕ್ರಮವನ್ನು ಉದ್ಘಾಟಸಿದ ಕೆ.ಎಲ್.ಇ ಸಂಸ್ಥೆಯ ನಿರ್ದೇಶಕ ಡಾ.ಬಿ.ಶ್ರೀನಿವಾಸ ಪ್ರಸಾದ, ಇಂದಿನ ದಿನಗಳಲ್ಲಿ ಆಯುರ್ವೇದ ಪದ್ಧತಿಯನ್ನು ವೈಜ್ಞಾನಿಕರಣ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಂಶೋಧನ ಕೇಂದ್ರದ ಸಿಬ್ಬಂದಿ ಸಂಯೋಜಕ ಡಾ.ನಿರ್ಮಲಾ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ವೈದ್ಯರಾದ ಡಾ.ವಿಜಯಲಕ್ಷ್ಮಿ ಪೂಜಾರಿ, ಡಾ. ಕಾಶೀನಾಥ ಹದಿಮೂರ ಮುಂತಾದವರು ಉಪಸ್ಥಿತರಿದ್ದರು. ಆಯುರ್ವೇದ, ಎಂಜನಿಯರಿಂಗ್ ಹಾಗೂ ಬೇರೆ ಬೇರೆ ಕಾಲೇಜುಗಳಿಂದ ಸುಮಾರು 80 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 