ಆರೋಗ್ಯಕರ ಭವಿಷ್ಯಕ್ಕಾಗಿ ಆಯುರ್ವೇದ ತುಂಬಾ ಮುಖ್ಯ
Ayurveda is very important for a healthy future
ಲೋಕದರ್ಶನ ವರದಿ
ಮಾಂಜರಿ 23: ‘ಆರೋಗ್ಯಕರ ಭವಿಷ್ಯಕ್ಕಾಗಿ ಆಯುರ್ವೇದ’ ಎಂಬ ಸಂಕಲ್ಪದೊಂದಿಗೆ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅಂಗವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂಕಲಿ ಗ್ರಾಮದ ಗೊಮ್ಮಟೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಹಾಗೂ ಸಂಸ್ಥೆಯ ಡಾ. ಎನ್.ಎ. ಮಗದುಮ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಘಟಕದ ವತಿಯಿಂದ ಬುಧವಾರ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಎನ್.ಎ. ಮಗದುಮ ಅವರು, ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ಪದ್ಧತಿಯಲ್ಲ. ಆರೋಗ್ಯವನ್ನು ಕಾಪಾಡಿಕೊಂಡು, ರೋಗಗಳು ಬಾರದಂತೆ ತಡೆಗಟ್ಟುವ ಹಾಗೂ ಆರೋಗ್ಯಕರ ಜೀವನ ನಡೆಸಲು ಮಾರ್ಗದರ್ಶನ ನೀಡುವ ಸಮಗ್ರ ಜೀವನಶಾಸ್ತ್ರವಾಗಿದೆ ಎಂದು ಹೇಳಿದರು.
ಆಹಾರ-ವಿಹಾರ, ದಿನಚರಿ, ಋತುಚರಿ, ಯೋಗ, ಸಮತೋಲಿತ ಜೀವನಶೈಲಿ ಹಾಗೂ ಪ್ರಕೃತಿಯೊಂದಿಗೆ ಹೊಂದಾಣಿಕೆಯಿಂದ ಬದುಕುವುದಕ್ಕೆ ಆಯುರ್ವೇದದಲ್ಲಿ ವಿಶೇಷ ಮಹತ್ವವಿದೆ ಎಂದು ತಿಳಿಸಿದರು. ಅಂಕಲಿ ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮಣಪ್ಪ ಅರಿ ಮಾತನಾಡಿ, ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ ಹಾಗೂ ವಿವಿಧ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಆಯುರ್ವೇದದ ಆರೋಗ್ಯ ಸಂವರ್ಧನಾ ತತ್ವಗಳು ಇಂದಿಗೂ ಪರಿಣಾಮಕಾರಿಯಾಗಿವೆ ಎಂದು ಹೇಳಿದರು.
ಪ್ರಾಚಾರ್ಯ ಪ್ರಸನ್ನ ಸಾವನೂರ ಮಾತನಾಡಿ, ಆಯುರ್ವೇದವನ್ನು ಕೇವಲ ರೋಗ ಗುಣಪಡಿಸುವುದಕ್ಕೆ ಸೀಮಿತಗೊಳಿಸದೆ, ರೋಗ ಬರುವ ಮುನ್ನವೇ ತಡೆಗಟ್ಟುವ ದೃಷ್ಟಿಕೋನದಿಂದ ಬಳಸಬೇಕು. ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ವೈಜ್ಞಾನಿಕ ಸಂಶೋಧನೆಯೊಂದಿಗೆ ಸಂಯೋಜಿಸಿ ಗುಣಮಟ್ಟದ ಆರೋಗ್ಯ ಸೇವೆ ನೀಡುವುದು ಇಂದಿನ ಅಗತ್ಯವಾಗಿದೆ ಎಂದರು. ಆಯುರ್ವೇದ ಶಿಕ್ಷಣದ ಜೊತೆಗೆ ಸಂಶೋಧನೆ, ರೋಗಿಗಳ ಸೇವೆ ಹಾಗೂ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯಗಳಿಗೆ ಸಂಸ್ಥೆಯ ವತಿಯಿಂದ ನಿರಂತರ ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಎನ್.ಎ. ಮಗದುಮ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 