ಜುಗೂಳದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಚಾಲನೆ : ಉಮೇಶ ಪಾಟೀಲ
Ayushman Health Center inaugurated in Jugula: Umesh Patil
ಕಾಗವಾಡ 13 : ಶಾಸಕ ರಾಜು ಕಾಗೆ, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಇವರ ವಿಶೇಷ ಪ್ರಯತ್ನದಿಂದ ಜುಗೂಳ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಗ್ರಾಮಸ್ಥರು ಬಹುದಿನಗಳ ಬೇಡಿಕೆ ಈಗ ಈಡೇರಿದ್ದು, ರೂ. 65 ಲಕ್ಷ ಶಾಸಕರ ಅನುದಾನಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ ಎಂದು ಕಾಗವಾಡ ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಪಾಟೀಲ ತಿಳಿಸಿದ್ದಾರೆ.
ಅವರು ಶನಿವಾರ ದಿ. 13 ರಂದು ತಾಲೂಕಿನ ಜುಗೂಳ ಗ್ರಾಮದಲ್ಲಿ ಮಾತನಾಡುತ್ತಿದ್ದರು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿರುವ ಶಾಸಕರು, ಜುಗೂಳ ಗ್ರಾಮದ ಅಭಿವೃದ್ಧಿಗೆ ಅನುದಾನದ ಹೊಳೆಯನ್ನೇ ಹರಿಸಿದ್ದಾರೆ. ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಿಸುವ ಮೂಲಕ ಈಗ ಗ್ರಾಮಸ್ಥರ ಬಹುದಿನಗಳ ಕನಸನ್ನು ಈಡೇರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಪರ ಮತ್ತು ಜನಪರ ಕಾರ್ಯಗಳಿಂದಾಗಿ 2028 ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಈ ಸಮಯದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷ ಕಾಕಾಸಾಬ ಪಾಟೀಲ, ಅನಿಲ ಕರೋಲೆ, ಅಕ್ಷಯ ಪಾಟೀಲ, ಅಮೀನ ನಂದಗಾವೆ, ಬಸವರಾಜ ನಂದಾಳೆ, ಮಹಾದೇವ ಕಾಂಬಳೆ, ಚಿದಾನಂದ ತಾರದಾಳೆ, ಸುರೇಶ ಪಾಟೀಲ, ದಯಾನಂದ ಮಿನಚೆ, ಶಿವಾನಂದ ಅಮ್ಮಣಗೆ, ಬಿಂದು ಅಧೋಕೆ, ಫಾರೂಖ ಕಳಾವಂತ, ಗುತ್ತಿಗೆದಾರ ವಿಜಯ ಚಿಂಚಲೆ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 