ಶಬರಿಮಲೆ, ನ 19 ಒಂದೇ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಆದಾಯ ಮೂರು ಕೋಟಿರೂಪಾಯಿಗೆ ಏರಿಕೆಯಾಗಿದೆ. ಕಳೆದ ಶನಿವಾರ ಮಂಡಲ ಪೂಜೆಗಾಗಿ ದೇಗುಲದ ಬಾಗಿಲು ತೆರೆಯಲಾಗಿದ್ದು ಅದೇ ದಿನ ಹೆಚ್ಚಿನ ಭಕ್ತರು ಶಬರಿಮಲೆಗೆ ಆಗಮಿಸಿ ಸ್ವಾಮಿಯ ದರ್ಶನ ಪಡೆದಿದ್ದಾರೆ.ದೇವಾಲಯಕ್ಕೆ ಬರೋಬರಿ 3.30 ಕೋಟಿ ಹಣವನ್ನು ಭಕ್ತರು ಕಾಣಿಕೆಯಾಗಿ ಸಲ್ಲಿಸಿದ್ದಾರೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದೆ. ಕಳೆದ ಬಾರಿ 2.04 ಕೋಟಿ ರೂ ಹಣ ಸಂಗ್ರಹವಾಗಿತ್ತು ಜೊತೆಗೆ ಕಳೆದ ವರ್ಷ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶ ನಿಷೇಧಿಸಿ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿದ್ದರು. ಇದೆ 16ರ ಸಂಜೆ 5.30ಕ್ಕೆ ಮಂಡಲ-ಮಕ್ಕವರ್ಿಲಕ್ಕು ಪೂಜೆಗಾಗಿ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಾಗಿದ್ದು ಈವರೆಗೆ 70 ಸಾವಿರಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಎನ್. ವಾಸು ಅವರ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅಯ್ಯಪ್ಪಸ್ವಾಮಿ ದೇವಾಲಯದ ಆದಾಯ ಶೇ.50ರಷ್ಟು ಹೆಚ್ಚಾಗಿದೆ ಎಂದರು.