ಭ. ಮಹಾವೀರ ಜಯಂತಿ ಆಚರಣೆ
B. Mahavir Jayanti Celebration
ಲೋಕದರ್ಶನ ವರದಿ
ತಾಳಿಕೋಟಿ 30: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.30 ಸೋಮವಾರದಂದು ಮಹಾವೀರ ಜಯಂತಿಯನ್ನು ಆಚರಣೆ ಮಾಡಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರರಾಗಿದ್ದು, ಜೈನ ಧರ್ಮವನ್ನು ಪ್ರಚಾರ ಮಾಡಿ ಪ್ರಸಾರ ಮಾಡಿದ ಮಹಾನ್ ತತ್ವಜ್ಞಾನಿ ಮತ್ತು ಧರ್ಮಗುರು. ಅವರು ಅಹಿಂಸಾ ಮತ್ತು ಸತ್ಯದ ಮಹತ್ವವನ್ನು ಜಗತ್ತಿಗೆ ತಿಳಿಸಿದವರು. ಮಹಾವೀರರ ಸಾಧನೆಗಳು ಮಾನವಕುಲಕ್ಕೆ ಶಾಂತಿ, ಸತ್ಯ ಮತ್ತು ಅಹಿಂಸೆಯ ದಾರಿಯನ್ನು ತೋರಿಸಿವೆ. ಅವರ ತತ್ವಗಳು ಇಂದಿಗೂ ಪ್ರಪಂಚದ ನೈತಿಕ ಬದುಕಿಗೆ ಮಾರ್ಗದರ್ಶಕವಾಗಿವೆ ಎಂದು ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣಧೋಳಿ, ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಟಿ.ವ್ಹಿ ಶೆಟ್ಟಿ, ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 