ಪ್ರಭಾರಿ ಮುಖ್ಯಾಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ
B. Mallikarjuna assumes charge as Chief Officer-in-Charge
ಕಂಪ್ಲಿ 11: ಸ್ಥಳೀಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿ ಬಿ.ಮಲ್ಲಿಕಾರ್ಜುನ ಇವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಹಿಂದಿನ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ವಯೋ ನಿವೃತ್ತಿ ಹೊಂದಿದ ಹಿನ್ನಲೆ ಖಾಲಿಯಾಗಿದ್ದ ಮುಖ್ಯಾಧಿಕಾರಿ ಸ್ಥಾನಕ್ಕೆ ಇಲ್ಲಿನ ಪುರಸಭೆಯಲ್ಲೇ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ ಬಿ.ಮಲ್ಲಿಕಾರ್ಜುನ ಅವರಿಗೆ ಅಧಿಕಾರವಹಿಸಲಾಗಿದೆ. ಇಲ್ಲಿನ ಸಿಬ್ಬಂದಿಗಳು ಮುಖ್ಯಾಧಿಕಾರಿಗೆ ಹೂವಿನ ಮಾಲಾರೆ್ಣಯೊಂದಿಗೆ ಸ್ವಾಗತಿಸಿದರು.
ನಂತರ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಮಾತನಾಡಿ, ಇಲ್ಲಿನ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿ ನಮಗೆ ಅಧಿಕಾರ ನೀಡಿದ್ದು, ಅಧಿಕಾರದ ಅವಧಿಗೊಳಗೆ ಜನತೆಗೆ ಸರ್ಕಾರದ ಯೋಜನೆಗಳನ್ನು ಸಮರ್ಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ರಮೇಶ ಬೆಳಂಕರ್, ಆಂಜಿನೇಯ, ಭರಮಪ್ಪ, ಆನಂದ, ಗೌಸ್, ನಾಗರಾಜ, ವಿಜಯಲಕ್ಷ್ಮೀ, ಶಾಹಿದಾ, ಮೇಘನಾ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 