ಕಾರ್ಯಪಡೆ ರಚಿಸುವಂತೆ ಶಾಸಕ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನವರದಿ

ಬಳ್ಳಾರಿ ಏ 11. ಕರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಗ್ರಾಮೀಣ ಕ್ಷೇತ್ರದ ಜನರ ತುತರ್ು ನೆರವಿಗಾಗಿ ಸಹಾಯವಾಣಿ ಆರಂಭಿಸುವುದರ ಜತೆಗೆ ಕಾರ್ಯಪಡೆ ರಚಿಸುವಂತೆ ಶಾಸಕ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. 

  ನಗರದ ತಾಪಂ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ತಹಸೀಲ್ದಾರ, ತಾಪಂ ಇಒ, ಟಿಎಚ್ಒ, ಕೃಷಿ, ತೋಟಗಾರಿಕೆ, ಆಹಾರ, ಕುಡಿಯುವ ನೀರು ಸರಬರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿರುವ ತಾಲೂಕು ಮಟ್ಟದ ಕಾರ್ಯಪಡೆ ರಚಿಸಬೇಕು. ಜಿಪಂ, ತಾಪಂ ಹಾಗೂ ಗ್ರಾಪಂ ಜನಪ್ರತಿನಿಧಿಗಳು ಈ ಕಾರ್ಯಪಡೆಯಲ್ಲಿರಬೇಕು. ಈ ಕಾರ್ಯಪಡೆ ಮೂಲಕ ಕ್ಷೇತ್ರದ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಹೇಳಿದರು.

  ದಿನದ 24 ಗಂಟೆ ಕಾರ್ಯನಿರ್ವಹಿಸುವ ಸಹಾಯವಾಣಿ ಆರಂಭಿಸಬೇಕು. ಕೃಷಿ ಉತ್ಪನ್ನಗಳ ಸಾಗಣೆಗೆ ಸಮಸ್ಯೆಯಾದಾಗ ರೈತರು ಈ ಸಹಾಯವಾಣಿಗೆ ಕರೆ ಮಾಡಿದರೆ ಸ್ಪಂದಿಸಬೇಕು. ಕ್ಷೇತ್ರ ವ್ಯಾಪ್ತಿಯ ಜನರು ಹೆರಿಗೆ ಸೇರಿದಂತೆ ಆರೋಗ್ಯ ಸಮಸ್ಯೆಗಳಿಗೂ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. 

     ಆಸ್ಪತ್ರೆಗೆ ದಾಖಲಿಸಲು ವಾಹನ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಬಿ.ನಾಗೇಂದ್ರ ತಿಳಿಸಿದರು.ತಾಪಂ ಇಒ ಎಂ.ಬಸಪ್ಪ ಮಾತನಾಡಿ, ಸೋಮವಾರದಿಂದ ಸಹಾಯವಾಣಿ ಕಾಯರ್ಾರಂಭ ಮಾಡಲಿದೆ. 

 ಕೊರೊನಾ ವಿಚಾರ ಹಾಗೂ ಅಗತ್ಯ ಸೇವೆಗಳಿಗಾಗಿ ಜನರು ಕರೆ ಮಾಡಬಹುದು ಎಂದು ತಿಳಿಸಿದರು. ತಹಸೀಲ್ದಾರ್ ಯು.ನಾಗರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.