ಮಾರ್ಚ್‌16 ರಂದು ಬಿ. ಎಸ್‌. ಯಡಿಯೂರ​‍್ಪ ಕಲ್ಯಾಣ ಮಂಟಪ ಉದ್ಘಾಟನೆ

B. S. Yediyurappa Kalyana Mantapa to be inaugurated on March 16

ಬೈಲಹೊಂಗಲ 14: ರಾಜ್ಯದ ಮಾಜಿ ಮುಖ್ಯಮಂತ್ರಿ, ರೈತನಾಯಕ ಬಿ.ಎಸ್‌. ಯಡಿಯೂರ​‍್ಪನವರ ಹೆಸರಿನಲ್ಲಿ ಗುರು ರೋಡ್ ಲೈನ್ಸ್‌ ಸಂಸ್ಥಾಪಕ ಗುರುದೇವ ನಿಂಗನಗೌಡ ಪಾಟೀಲ ಇವರು ಬೈಲಹೊಂಗಲದ ಮರಡಿ ನಾಗಲಾಪುರ ಗದ್ದಿಕರವಿನಕೊಪ್ಪ ಕ್ರಾಸ್ ನಲ್ಲಿ ನಿರ್ಮಿಸಿರುವ 'ಬಿ.ಎಸ್‌. ಯಡಿಯೂರ​‍್ಪ ಕಲ್ಯಾಣ ಮಂಟಪ' ಮಾರ್ಚ್‌ 16ರಂದು ಉದ್ಘಾಟನೆಗೊಳ್ಳಲಿದೆ.  

ಕಲ್ಯಾಣ ಮಂಟಪವನ್ನು ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರ​‍್ಪ ಉದ್ಘಾಟಿಸಲಿದ್ದು, ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ವಹಿಸಲಿದ್ದಾರೆ. ಸಾನಿಧ್ಯವನ್ನು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ಕಾರ್ಯಕ್ರಮದಲ್ಲಿ ನಿಡಸೋಶಿ ಸಿದ್ದ ಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು, ಮುರುಗೋಡ ದುರದುಂಡೇಶ್ವರ ಮಠದ ನೀಲಕಂಠ ಮಹಾಸ್ವಾಮಿಗಳು, ಧಾರವಾಡ ಮುರುಗಾ ಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಕಾರಂಜಿ ಮಠದ ಗುರುಸಿದ್ಧ ಮಹಾಸ್ವಾಮಿಗಳು, ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು, ಹುಕ್ಕೇರಿ ಗುರು ಶಾಂತೇಶ್ವರ ಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜ ಯೋಗೇಂದ್ರ ಮಹಾಸ್ವಾಮಿಗಳು, ಬೈಲಹೊಂಗಲ ಮೂರುಸಾವಿರ ಮಠದ ಪ್ರಭು ನೀಲಕಂಠ ಮಹಾಸ್ವಾಮಿಗಳು, ಶೇಗುಣಿಸಿ ವಿರಕ್ತಮಠದ ಮಹಾಂತ ಪ್ರಭು ಮಹಾಸ್ವಾಮಿಗಳು, ಅರಳಿ ಕಟ್ಟಿ ವಿರಕ್ತಮಠದ ಶಿವಮೂರ್ತಿ ಮಹಾಸ್ವಾಮಿಗಳು ಉಪಸ್ಥಿತರಿರಲಿದ್ದಾರೆ. 

ಇದೇ ಸಂದರ್ಭದಲ್ಲಿ ಮೈತ್ರಾದೇವಿ ಯಡಿಯೂರ​‍್ಪ ಭೋಜನಾ ಲಯವನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯ ಅಭಿಯಂತರ ವಿರೂಪಾಕ್ಷಿ ಯಮಕನಮರಡಿ, ರಾಜ್ಯ ಸರ್ಕಾರದ ನಿಕಟಪೂರ್ವ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಸೇರಿದಂತೆ ರಾಜಕೀಯ ಪ್ರತಿನಿಧಿಗಳು, ಸಮಾಜಸೇವಕರು ಪಾಲ್ಗೊಳ್ಳಲಿದ್ದಾರೆ.