ಬಿ.ಇಡಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ನ ಪರೀಕ್ಷಾ ಫಲಿತಾಂಶ ಪ್ರಕಟ
B.ED 1st and 3rd Semester Exam Result Declared
ಕೊಪ್ಪಳ 08: ಕೊಪ್ಪಳ ವಿಶ್ವವಿದ್ಯಾಲಯ ಕೊಪ್ಪಳ ಜೂನ ತಿಂಗಳಲ್ಲಿ ನಡೆಸಿದ ಬಿ.ಇಡಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ನ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ನಗರದ ಶ್ರೀ ಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪರೀಕ್ಷೆಗೆ ಹಾಜರಾದ ಬಿ.ಇಡಿ.ಪ್ರಥಮ ಸೆಮಿಸ್ಟರ್‌ನ 94 ವಿದ್ಯಾರ್ಥಿಗಳಿಗೆ 94 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿರುತ್ತಾರೆ.600 ಅಂಕಗಳಿಗೆ 555 (92.5ಅ), ಕು.ಸುಷ್ಮಾ ಮಠದ, ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು, 553 (92.17ಅ), ಕು, ಪಾವನಿ ಯನ್ನಿ ದ್ವಿತೀಯ ಸ್ಥಾನವನ್ನು ಹಾಗೂ 552 (92.00ಅ), ಶ್ರೀಮತಿ ಪಾಟೀಲ್ ಸುಬಾಷಿನಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಬಿ.ಇಡಿ.ತೃತಿಯ ಸೆಮಿಸ್ಟರ್‌ನ 98 ವಿದ್ಯಾರ್ಥಿಗಳಿಗೆ 96 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿರುತ್ತಾರೆ. 600 ಅಂಕಗಳಿಗೆ 562 (93.70ಅ), ಕು.ಆಯಿಷಾ, ಮಹಾವಿದ್ಯಾಲಯಕ್ಕೆ ಪ್ರಥಮ ಸ್ಥಾನವನ್ನು, 556 (92.72ಅ), ಕು, ಅಕ್ಷತಾ ಟಿ. ದ್ವಿತೀಯ ಸ್ಥಾನವನ್ನು ಹಾಗೂ 555 (92.50ಅ), ಕು.ಸಂಜನಾ ಪತ್ತಾರತೃತೀಯ ಸ್ಥಾನವನ್ನು ಪಡೆದಿದ್ದಾರೆ.ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಪೂಜ್ಯ ಶ್ರೀಗಳು, ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು ಸದಸ್ಯರು, ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಿಬ್ಬಂದಿವರ್ಗಅಭಿನಂದನೆ ಸಲ್ಲಿಸಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 