ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪಗೆ ಜಾಮೀನು ಮಂಜೂರು
B.S. Yeddyurappa granted bail in the POCSO case
ಧಾರವಾಡ 07: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ ಅವರು ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.
ಎಫ್‌ಐಆರ್, ಸಿಐಡಿ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ವಿಚಾರಣಾ ನ್ಯಾಯಾಲಯ 4.7.2024ರಂದು ಸಂಜ್ಞೇ ಪರಿಗಣಿಸಿರುವ ಆದೇಶ ಪ್ರಶ್ನಿಸಿದ್ದ ಬಿಎಸ್‌ವೈ ಅರ್ಜಿಯನ್ನು ಭಾಗಶಃ ಪುರಸ್ಕರಿಸಲಾಗಿದೆ. ವಿಚಾರಣಾ ನ್ಯಾಯಾಲಯವು ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಯಡಿಯೂರಪ್ಪ ಅವರಿಗೆ ಸೀಮಿತವಾಗಿ ವಜಾ ಮಾಡಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಎಲ್ಲವೂ ಹಾಗೆ ಉಳಿಯಲಿದೆ.
ಈ ಆದೇಶದ ಸಮಯದಲ್ಲಿ ಮಾಡಿದ ಅವಲೋಕನಗಳನ್ನು ಗಮನದಲ್ಲಿಟ್ಟುಕೊಂಡು ಅಂತಿಮ ವರದಿಗೆ ಸಂಬಂಧಿಸಿದಂತೆ ಆದೇಶ ಮಾಡಲು ಪ್ರಕರಣವನ್ನು ಮತ್ತೆ ವಿಚಾರಣಾ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಇದರಿಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆಯಾದರೂ ಈ ಪ್ರಕರಣದಿಂದ ಎದುರಾಗಿರುವ ಸಂಕಷ್ಟ ಇನ್ನೂ ತಪ್ಪಿಲ್ಲ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಕಳೆದ 2024 ಮಾರ್ಚ್ 14ರ ರಾತ್ರಿ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿಂದೆ, ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದಿತ್ತು ಎನ್ನುವ ಆರೋಪ ಮಾಡಿ ಮಹಿಳೆ ದೂರು ನೀಡಲಾಗಿತ್ತು. ಆದರೆ, ಯಾವುದೇ ಕ್ರಮ ಜರುಗಿರಲಿಲ್ಲ.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 