ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ನೀಡುವಂತೆ ತಹಶೀಲ್ದಾರರಿಗೆ ಬಿ.ಟಿ. ಚಂದ್ರಶೇಖರ್ ಮನವಿ

ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ನೀಡುವಂತೆ ತಹಶೀಲ್ದಾರರಿಗೆ ಬಿ.ಟಿ. ಚಂದ್ರಶೇಖರ್ ಮನವಿ B.T. Chandrashekhar appeals to the Tahsildar to provide old-age pensions to senior citizens

ಲಕ್ಷ್ಮೇಶ್ವರ 20: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹಾಗೂ 1008 ಬಡವರ ಕಲ್ಯಾಣೋತ್ಸವ ಕಾರ್ಯಕ್ರಮದ ರೂವಾರಿಯಾದ ಬಿ.ಟಿ. ಚಂದ್ರಶೇಖರ್ ಅವರು ಲಕ್ಷ್ಮೇಶ್ವರ ತಹಶೀಲ್ದಾರ್ ಅವರಿಗೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.  ತಾಲೂಕಿನ ಅನೇಕ ಹಿರಿಯ ನಾಗರಿಕರಿಗೆ ಸರ್ಕಾರದಿಂದ ದೊರೆಯಬೇಕಾದ ವೃದ್ಧಾಪ್ಯ ವೇತನ ಸಮರ​‍್ಕವಾಗಿ ತಲುಪುತ್ತಿಲ್ಲ. ಇದರಿಂದ ವೃದ್ಧರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು, ವೃದ್ಧಾಪ್ಯ ವೇತನದಿಂದ ವಂಚಿತರಾಗಿರುವ ಎಲ್ಲ ಅರ್ಹ ಫಲಾನುಭವಿಗಳಿಗೆ ಸಂಬಂಧಿಸಿದ ಅಧಿಕಾರಿಗಳ ಮೂಲಕ ಶೀಘ್ರದಲ್ಲಿ ವೇತನ ಸೌಲಭ್ಯ ಒದಗಿಸುವಂತೆ ಅವರು ಮನವಿಯಲ್ಲಿ ಒತ್ತಾಯಿಸಿದರು.  

ಇದೇ ವೇಳೆ, ಗ್ರಾಮದಲ್ಲಿ ಈ ಹಿಂದೆ ಪ್ರತಿಭಟನೆ ನಡೆಸಿ ಗ್ರಾಮ ರಸ್ತೆಗಳು ಹಾಗೂ ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಮನವಿ ಸಲ್ಲಿಸಲಾಗಿದ್ದರೂ, ಇದುವರೆಗೆ ಯಾವುದೇ ಕಾಮಗಾರಿ ಕೈಗೊಳ್ಳಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕು. ಇಲ್ಲದಿದ್ದರೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.  ಇನ್ನೂ, ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಪ್ರತಿ ಎಕರೆಗೆ ?50 ಸಾವಿರ ಪರಿಹಾರವನ್ನು ರೈತರಿಗೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುವಂತೆ ತಹಶೀಲ್ದಾರರನ್ನು ಆಗ್ರಹಿಸಿದರು.ಈ ಸಂದರ್ಭದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ಪದಾಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.