ಜಮೀನಿನಲ್ಲಿ ರೈತರ ಸಮಸ್ಯೆ ಆಲಿಸಿದ ಬಿ.ಟಿ. ಚಂದ್ರಶೇಖರ್
B.T. Chandrashekhar listened to the farmers' problems in the fields
ಲಕ್ಷ್ಮೇಶ್ವರ, ಜು.26: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ರೈತರ ಸಮಸ್ಯೆಗಳನ್ನು ಆಲಿಸುತ್ತಿರುವ ರಾಜ್ಯ ರೈತೋದಯ ಹಸಿರು ಸೇನೆ ರಾಜ್ಯಾಧ್ಯಕ್ಷ ಹಾಗೂ 1008 ಬಡವರ ಕಲ್ಯಾಣೋತ್ಸವದ ನೇತಾರ ಬಿ.ಟಿ. ಚಂದ್ರಶೇಖರ್ ಅವರು ತಾಲೂಕಿನ ಯಳವತ್ತಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ, ರೈತರೊಂದಿಗೆ ಊಟ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ರೈತರೊಂದಿಗೆ ಮಾತನಾಡಿದ ಅವರು, ಈ ಬಾರಿ ಮಳೆಯ ಅಭಾವದಿಂದ ಕೃಷಿಗೆ ತೊಂದರೆಯಾಗಿದ್ದು, ಎಲ್ಲ ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳೆ ವಿಮೆ ಮಾಡಿಕೊಂಡರೆ ಪ್ರಕೃತಿ ವಿಕೋಪ ಅಥವಾ ಬೆಳೆ ಹಾನಿಯಾದ ಸಂದರ್ಭದಲ್ಲಿ ಸರ್ಕಾರದಿಂದ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಯಾವುದೇ ರೈತರು ಬೆಳೆ ವಿಮೆಯಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.
ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಬಿ.ಟಿ. ಚಂದ್ರಶೇಖರ್ ಅವರು ರೈತರ ಜಮೀನುಗಳಿಗೆ ತೆರಳಿ ಸ್ಥಳದಲ್ಲೇ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿದ್ದಾರೆ. ರೈತರೊಂದಿಗೆ ನೇರ ಸಂಪರ್ಕ ಸಾಧಿಸಿ ಅವರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಬಿ.ಟಿ. ಚಂದ್ರಶೇಖರ್ ಅವರ ಕಾರ್ಯವನ್ನು ರೈತರು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 