ಮಹಿಳೆಯರು ಇದ್ದರು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ಗೆ ಬಿ.ಟಿ. ಚಂದ್ರಶೇಖರ್ ಭೇಟಿ

ಮಹಿಳೆಯರು ಇದ್ದರು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ಗೆ ಬಿ.ಟಿ. ಚಂದ್ರಶೇಖರ್ ಭೇಟಿ  B.T. Chandrashekhar met former MLA Ganganna Mahantashettar; women were present

ಲಕ್ಷ್ಮೇಶ್ವರ, ಜು.27: ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹಾಗೂ 1008 ಬಡವರ ಕಲ್ಯಾಣೋತ್ಸವದ ರೂವಾರಿ ಬಿ.ಟಿ. ಚಂದ್ರಶೇಖರ್ ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಆಲಿಸಿದರು.  

ಈ ಸಂದರ್ಭದಲ್ಲಿ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಕ್ಷೇತ್ರದ ಅಭಿವೃದ್ಧಿ, ಜನಸೇವೆ ಹಾಗೂ ಸಮಾಜಮುಖಿ ಕಾರ್ಯಗಳ ಕುರಿತು ಉಭಯ ನಾಯಕರು ಚರ್ಚಿಸಿದರು.  

ಬಿ.ಟಿ. ಚಂದ್ರಶೇಖರ್ ಅವರನ್ನು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಆತ್ಮೀಯವಾಗಿ ಸ್ವಾಗತಿಸಿ, ಸಮಾಜದ ಅಭಿವೃದ್ಧಿಗೆ ಕೈಜೋಡಿಸುವಂತೆ ಕರೆ ನೀಡಿದರು.  ಕಾರ್ಯಕ್ರಮದಲ್ಲಿ ಭೋವಿ ವಡ್ಡರ ಸಮಾಜದ ಮುಖಂಡರಾದ ಗುರುಪ್ಪ ವಡ್ಡರ, ಮಲ್ಲೇಶಪ್ಪ ವಡ್ಡರ ಸೇರಿದಂತೆ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.