ಕಾಲೇಜ್ ಫೀಸ್ ಕಟ್ಟಿಲ್ಲ ಎಂದು ಪಿಯುಸಿ ವಿದ್ಯಾರ್ಥಿನಿಯನ್ನು ಹೊರನಿಲ್ಲಿಸಿದ ಬಿಎಜೆಎಸ್‌ಎಸ್ ಶಿಕ್ಷಣ ಸಂಸ್ಥೆ: ಶಿಕ್ಷಣ ಸಂಸ್ಥೆ ಮೇಲೆ ಕ್ರಮ ಜರುಗಿಸಲು ಎಸ್‌ಎಫ್‌ಐ ಆಗ್ರಹ

ಕಾಲೇಜ್ ಫೀಸ್ ಕಟ್ಟಿಲ್ಲ ಎಂದು ಪಿಯುಸಿ ವಿದ್ಯಾರ್ಥಿನಿಯನ್ನು ಹೊರನಿಲ್ಲಿಸಿದ ಬಿಎಜೆಎಸ್‌ಎಸ್ ಶಿಕ್ಷಣ ಸಂಸ್ಥೆ: ಶಿಕ್ಷಣ ಸಂಸ್ಥೆ ಮೇಲೆ ಕ್ರಮ ಜರುಗಿಸಲು ಎಸ್‌ಎಫ್‌ಐ ಆಗ್ರಹ BAJSS educational institution expelled PUC student for non-payment of college fees: SFI demands acti

ರಾಣೇಬೆನ್ನೂರ 28 : ನಗರದ ಬಿಎಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪಿಯುಸಿ ವಿದ್ಯಾರ್ಥಿನಿಯನ್ನು ಕಾಲೇಜ್ ಶುಲ್ಕ (ಫೀಸ್ ) ಕಟ್ಟಿಲ್ಲ ಎಂದು ಹೊರನಿಲ್ಲಿಸಿ, ಮಾನಸಿಕ ಕಿರುಕುಳ ನೀಡಿದ ಅಮಾನವೀಯ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪತ್ರಿಕಾ ಹೇಳಿಕೆ ನೀಡಿದರು.ಜಿಲ್ಲಾಧಿಕಾರಿಗಳು ಹಾಗೂ ಪದವಿ ಪೂರ್ವ ಶಿಕ್ಷಣಾಧಿಕಾರಿ (ಡಿಡಿಪಿಯು) ನಿರ್ಲಕ್ಷ್ಯ, ಅಲಕ್ಷ್ಯದಿಂದಾಗಿ ಖಾಸಗಿ ಕಾಲೇಜ್ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡದಿರುವ ಕಾರಣ ಖಾಸಗಿ ಶಿಕ್ಷಣ ಸಂಸ್ಥೆಗಳ ಕಾಯ್ದೆ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡುವುದರ ಮೂಲಕ ಹಗಲು ದರೋಡೆ ಮಾಡುತ್ತಿದ್ದಾರೆ.

ಬಡವರು, ಹಿಂದುಳಿದ, ದಲಿತ ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಕಾಲೇಜ್ ಗಳಲ್ಲಿ ಈ ರೀತಿಯ ಹಿಂಸೆಯಿಂದ ಓದುವುದು ಅಸಾಧ್ಯವಾಗುತ್ತಿದೆ.ಸರಕಾರ ನಿಯಮಗಳ ಪ್ರಕಾರ ನಿಗದಿಪಡಿಸಿದಂತೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಅಭಿವೃದ್ಧಿ ಶುಲ್ಕ  (ಡೆವಲಪ್ ಮೆಂಟ್ ಫೀ) ನ್ನು ಸಂಗ್ರಹಿಸಲು ಅವಕಾಶವಿದೆ. ಈ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುವಂತಿಲ್ಲ. ಇದಕ್ಕೂ ಹೆಚ್ಚು ಸಂಗ್ರಹಿಸುವುದು ಕಾನೂನಿನ ಪ್ರಕಾರ ಅಪರಾಧ ಎಂದು ಶಿಕ್ಷಣ ಹಕ್ಕು ಕಾಯ್ದೆ 2009 ರ ಸೆಕ್ಷನ್ 13(2)(ಬಿ) ಹೇಳುತ್ತದೆ. ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ, ಹಿಂಸೆ ನೀಡಿದರೆ ದಂಡ ಹಾಕಬೇಕೆಂದು ಹೇಳಿದೆ. ವಿದ್ಯಾರ್ಥಿಗಳ ಸಂಖ್ಯೆ, ಕಲಿಕಾ ಮಾಧ್ಯಮ, ಶುಲ್ಕದ ವಿವರ, ಕ್ರೀಡಾಂಗಣ, ಶೌಚಾಲಯ, ಶಿಕ್ಷಕರ ಸಂಖ್ಯೆ, ಮುಂತಾದ ಮಾಹಿತಿಯನ್ನು ಶಾಲಾ ಆವರಣದಲ್ಲಿ 10ಸ16 ಸೈಜಿನಲ್ಲಿ ಫ್ಲೆಕ್ಸ್‌ ಪ್ರಕಟಿಸಬೇಕೆಂದು ಹಾಗೂ ಇದೇ ಮಾಹಿತಿಯನ್ನು ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ಆದರೆ, ಇದನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಜಾರಿ ಮಾಡದೆ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿನಿಯನ್ನು ನಿಂದನೆ, ಮಾನಸಿಕ ಕಿರುಕುಳ, ದೌರ್ಜನ್ಯ ವೆಸಗುವ ಶಿಕ್ಷಣ ಸಂಸ್ಥೆಯ ವಿರುದ್ಧ ಮಾನ್ಯತೆಯನ್ನು ರದ್ದು ಮಾಡಿ, ಇಲಾಖೆಯ ಆದೇಶವನ್ನು ಉಲ್ಲಂಘಿಸಿದ ಆದಾರದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಡೊನೆಷನ್ ನಿಯಂತ್ರಣಕ್ಕೆ ’ಜಿಲ್ಲಾ ಶಿಕ್ಷಣ ರೆಗ್ಯುಲೆಟಿಂಗ ಪ್ರಾಧಿಕಾರ’ ( ಡೊನೇಷನ್ ವಿರೋಧಿ ಸಮಿತಿ) ವನ್ನು ತಕ್ಷಣ ರಚಿಸಬೇಕು. ವಂತಿಗೆ ವಸೂಲಿಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ. ಕ್ರಮಕೈಗೊಳ್ಳಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವ ಕೇಂದ್ರೀಯ ಶಾಸನ ಜಾರಿಗೆ ತರಬೇಕು. ಒಂದು ವೇಳೆ ಬಿಎಜೆಎಸ್‌ಎಸ್ ಶಿಕ್ಷಣ ಸಂಸ್ಥೆಯ ಮೇಲೆ ಶಿಸ್ತು ಕ್ರಮಕೈಗೊಳದಿದ್ದರೆ ಜಿಲ್ಲಾಧಿಕಾರಿ ಕಛೇರಿ ಎದುರು ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.