ಬೆಂಗಳೂರು, ಫೆ 14 : ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಬೆಂಗಳೂರು ಹೊರವಲಯ ಆನೇಕಲ್ ನ ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ತಿರುಪಾಳ್ಯದಲ್ಲಿ ವರದಿಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಆನೇಕಲ್ ನ ಮರಸೂರು ಗ್ರಾಮದ ನಿವಾಸಿ ರವಿ ಎಂದು ಗುರುತಿಸಲಾಗಿದೆ.ಗುರುವಾರ ರಾತ್ರಿ ರವಿ ತಿರುಪಾಳ್ಯ ಬಳಿ ಬೈಕ್ ಮೇಲೆ ಬರುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.