ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಬಿ.ಸಿ.ಪಾಟೀಲ್ ಭೇಟಿ: ರೈತರಿಗೆ ಆತ್ಮಸ್ಥೈರ್ಯ ತುಂಬಿದ ಕೃಷಿ ಸಚಿವ
ಕೊಪ್ಪಳ, ಏ. 9, ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್, ಹಣವಾಳ, ಸಿಂಗನಾಳ, ಸಿಂಗನಾಳ ಕ್ಯಾಂಪ್, ಜಿರಾಳ ಕಲ್ಲಗುಡಿ ರೈತರ ಹೊಲಗೀಗೆ ಭೇಟಿ ನೀಡಿ ಬೆಳೆಯನ್ನು ಪರಿಶೀಲಿಸಿದ ಸಚಿವರು ರೈತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು.ಬೆಳೆ ನಷ್ಟದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿ, ಆದಷ್ಟು ಬೇಗ ಬೆಳೆ ನಷ್ಟ ಸಮೀಕ್ಷೆ ಮಾಡಬೇಕು. ಬೆಳೆ ನಷ್ಟದಿಂದ ಯಾವುದೇ ರೈತರು ಆತಂಕಕ್ಕೊಳಗಾಗುವುದು ಬೇಡ. ಪ್ರಕೃತಿ ವಿಕೋಪಗಳಾದಾಗ ಧೈರ್ಯದಿಂದ ಇರಬೇಕು. ಸರ್ಕಾರ ರೈತರ ಜೊತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ಶಾಸಕರಾದ ದಡೆಸೂಗೂರು ಬಸವರಾಜ್, ಪರಣ್ಣ ಮುನವಳ್ಳಿ,ಜಿಪಂ ಅಧ್ಯಕ್ಷ ವಿಶ್ವನಾಥ ರೆಡ್ಡಿ ಸೇರಿದಂತೆ ಕೃಷಿ ತೋಟಗಾರಿಕಾ ಅಧಿಕಾರಿಗಳು ಜೊತೆಗಿದ್ದರು. ಇದಕ್ಕೂ ಮುನ್ನ ದಾರಿ ಮಧ್ಯದಲ್ಲಿ ಕೆಲವು ರೈತರನ್ನು ಭೇಟಿಯಾದರು. ಕೊಪ್ಪಳ ಜಿಲ್ಲೆಯ ಮೆಟ್ರಿ ಗ್ರಾಮದಲ್ಲಿ ರೈತರನ್ನುದ್ದೇಶಿಸಿ ಮಾತನಾಡಿ, ಯಾವುದೇ ಆತಂಕವಿಲ್ಲದೇ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ ಎಂದು ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 