ಶ್ರೀನಗರ, ಅ 9: ಜಮ್ಮು - ಕಾಶ್ಮೀರದ 310 ವಲಯಗಳ ಬ್ಲಾಕ್ ಅಭಿವೃದ್ಧಿ ಮಂಡಳಿಗಳ ಅಧ್ಯಕ್ಷರ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬುಧವಾರ ಕಡೆದಿನ. ಮರುದಿನ ಅ 10 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಶುಕ್ರವಾರದವರೆಗೆ ಅವಕಾಶವಿದೆ. ಅ 24 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮತದಾನ ನಡೆಯಲಿದೆ. ಅಂದೇ ಮಧ್ಯಾಹ್ನ 3 ಗಂಟೆಗೆ ಮತ ಎಣಿಕೆ ನಡೆಯಲಿದೆ. ಪಂಚಾಯತ್ ರಾಜ್ ವ್ಯವಸ್ಥೆಯ ಎರಡನೇ ಹಂತದ ಚುನಾವಣಾ ಪ್ರಕ್ರಿಯೆ ನವೆಂಬರ್ 5 ರ ವೇಳೆಗೆ ಪೂರ್ಣಗೊಳ್ಳಲಿದೆ.